LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಿಂಗ್‌ರೋಡ್ ಯೋಜನೆ ರದ್ದತಿಗೆ ಪಿಆರ್‌ಆರ್ ರೈತ ಸಂಘ ಆಗ್ರಹ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಪೆರಿಫೆರಲ್ ರಿಂಗ್ ರಸ್ತೆ ( ಬ್ಯುಸಿನೆಸ್ ಕಾರಿಡಾರ್) ಯೋಜನೆಯನ್ನು 15 ದಿನಗಳ ಒಳಗೆ ರದ್ದುಗೊಳಿಸಬೇಕು, ಇಲ್ಲದಿದ್ದರೆ ಸಿ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಪಿಆರ್‌ಆರ್ ರೈತ ಹಾಗೂ ನಿವೇಶನದಾರರ ಸಂಘ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಾವಲಿಪುರ ಬಿ.ಶ್ರೀನಿವಾಸ್‌ ಮಾತನಾಡಿ, ಬಿಡಿಎ ಕಾಯ್ದೆಯ ಸೆಕ್ಷನ್ 27 ಪ್ರಕಾರ ಯಾವುದೇ ಅಧಿಸೂಚನೆ ಹೊರಡಿಸಿದ ಬಳಿಕ ಅದು ಜಾರಿಯಾಗದೇ ಹೋದಲ್ಲಿ 5 ವರ್ಷಗಳ ನಂತರ ಆ ಯೋಜನೆಯೇ ರದ್ದಾಗುತ್ತದೆ. ಪಿರ್ಆಆರ್‌ಯೋಜನೆಗಾಗಿ 20 ವರ್ಷಗಳಿಂದ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಈ ಭಾಗದ ರೈತರು ಆರ್ಥಿಕ ನಷ್ಟ, ಮಾನಸಿಕ ಯಾತನೆ ಅನುಭವಿಸಿದ್ದಾರೆ. ಸ್ವಂತ ಆಸ್ತಿಯ ಮೇಲೆ ಅಧಿಕಾರ ಇಲ್ಲದೆ ಬದುಕುತ್ತಿದ್ದೇವೆ. ಆದರೆ, ಬಿಡಿಎ ನಮಗಾಗಿ ಏನೂ ಮಾಡಲಿಲ್ಲ. ಈಗ ಹಳೆಯ ಪೆರಿಫೆರಲ್ ರಿಂಗ್ ರಸ್ತೆ-1 ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಭೂ ಸಂತ್ರಸ್ತ ರೈತರಿಗೆ ಪರಿಹಾರ ಪಡೆಯಲು ಸರ್ಕಾರ ಕಲ್ಪಿಸಲಾಗಿರುವ 5 ಆಯ್ಕೆಗಳು ರೈತರ ಮರಣ ಶಾಸನವಾಗಲಿದ್ದು, ಇದನ್ನು ನನ್ನು ನಾವು ನಾವು ಒಪ್ಪುವುದಿಲ್ಲ.

ಈ ಸಂಬಂಧ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಬಿಡಿಎ ಕಾಯ್ದೆ 1894ರ ಸೆಕ್ಷನ್ 27ರ ಪ್ರಕಾರ 5 ವರ್ಷಗಳ ಅವಧಿ ಮುಗಿದಿರುವುದರಿಂದ పిఆరా ఆరా ಭಾಗ-1 ಯೋಜನೆಯನ್ನು ರದ್ದುಗೊಳಿಸಿ, ಎಲ್ಲ ಭೂ ಮಾಲಿಕರಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‌ಒಸಿ) ನೀಡಬೇಕು ಎಂದು ಆಗ್ರಹಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ