Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಅಧಿಕೃತ  ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು. ಕಡ್ಡಾಯವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದರಪಟ್ಟಿ  ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚಿಸಿದ್ದಾರೆ.  


ಜಿಲ್ಲೆಯಲ್ಲಿ ಕಳೆದ  2-3 ವಾರಗಳಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು ಕೊಂಡು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಚಿತ್ರದುರ್ಗ ಮತ್ತು ಹೊಳಲ್ಕೆರೆಯ ಹಲವು ಭಾಗಗಳಲ್ಲಿ ಮೆಕ್ಕೆಜೋಳ 10 ರಿಂದ 25 ದಿನಗಳ ಬೆಳವಣಿಗೆ ಹಂತವಿರುವ ಬೆಳೆ ಇರುತ್ತದೆ.

ಇದಕ್ಕೆ ಯೂರಿಯಾ ರಸಗೊಬ್ಬರವನ್ನು ಮೇಲು ಗೊಬ್ಬರವಾಗಿ ರೈತರು ಬಳಸುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅಲ್ಲಲ್ಲಿ ರಸಗಗೊಬ್ಬರಗಳನ್ನು ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರಿಂದ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ಮೂಲಕ ದೂರುಗಳು ಸ್ವೀಕೃತವಾಗುತ್ತಿವೆ.

ಅದುದರಿಂದ ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದೆಂದು ಹಾಗೂ ಕಡ್ಡಾಯವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದರ ಪಟ್ಟಿ ಮತ್ತು  ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಲು ಸೂಚಿಸಲಾಗಿದೆ.

ತಪ್ಪಿದಲ್ಲಿ ರಸಗೊಬ್ಬರ (ನಿರವಯವ, ಸಾವಯವ ಅಥವಾ ಮಿಶ್ರಿತ) (ನಿಯಂತ್ರಣ) ಆದೇಶ, 1985ರ ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಹಾಗೂ ಕೃತಕ ರಸಗೊಬ್ಬರ ಅಭಾವ ಸೃಷ್ಠಿಸಿದ್ದು ಕಂಡುಬಂದಲ್ಲಿ ರಸಗೊಬ್ಬರ ಮಾರಾಟ ಪರವಾನಗಿಯನ್ನು ಅಮಾನತ್ತು/ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ