Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

3 ತಿಂಗಳಲ್ಲಿ ತೀರ್ಪು ಪ್ರಕಟಿಸಿ: ಎಲ್ಲ ಹೈಕೋರ್ಟಗಳಿಗೆ ಸುಪ್ರೀಮ ಕೋರ್ಟ ನಿರ್ದೇಶನ

ಹೊಸದಿಲ್ಲಿ, ಮೇ 29 : ಆದೇಶಗಳನ್ನು ಕಾಯ್ದಿರಿಸಿದ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ದೇಶದ ಎಲ್ಲ ಹೈಕೋರ್ಟಗಳಿಗೆ ಸುಪ್ರೀಮ ಕೋರ್ಟ ಶುಕ್ರವಾರ ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ಪ್ರಕಟಿಸುವಲ್ಲಿ ಆಗುವ ವಿಳಂಬವು ದಾವೆದಾರರಿಗೆ ತುಂಬಲಾರದ ನಷ್ಟ ಉಂಟುಮಾಡುತ್ತದೆ ಎಂದು ಸುಪ್ರೀಮ ಕೋರ್ಟ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯಮಾಲ್ಯ ಬಾಗ್ಚಿ ಅವರಿದ್ದ ಪೀಠ, ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೀಘ್ರ ತೀರ್ಪಿನ ಅಗತ್ಯವನ್ನು ಒತ್ತಿ ಹೇಳಿತು.

ಜಾಮೀನು ಅರ್ಜಿಗಳನ್ನು ಸಾಧ್ಯವಾದರೆ ಅದೇ ದಿನವೇ ಇತ್ಯರ್ಥಗೊಳಿಸಬೇಕು. ಒಂದು ವೇಳೆ ಆದೇಶವನ್ನು ಕಾಯ್ದಿರಿಸಿದರೆ, ಅದನ್ನು ಮರುದಿನವೇ ಪ್ರಕಟಿಸಿ ಜಾಲತಾಣದಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಸೂಚಿಸಿದೆ.

ಜಾಮೀನು ಮಂಜೂರು ಅಥವಾ ಶಿಕ್ಷೆ ಅಮಾನತು ಆದೇಶಗಳನ್ನು ಕೂಡಲೇ ಜೈಲು ಅಧಿಕಾರಿಗಳಿಗೆ ತಲುಪಿಸಬೇಕು. ವಿಚಾರಣಾಧೀನ ಕೈದಿ ಅಥವಾ ಅಪರಾಧಿಯನ್ನು ಅದೇ ದಿನ ಅಥವಾ ತಡವಾದರೆ ಮರುದಿನ ಬಿಡುಗಡೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಮ ಕೋರ್ಟ ಹೇಳಿದೆ.

ಸಂವಿಧಾನದ 142ನೇ ವಿಧಿಯಡಿ ತನ್ನ ವಿಶೇಷ ಅಧಿಕಾರ ಬಳಸಿರುವ ಸುಪ್ರೀಮ ಕೋರ್ಟ, ತೀರ್ಪಿನ ಕಾರ್ಯಾಚರಣೆಯ ಭಾಗವನ್ನು ಮೊದಲು ಪ್ರಕಟಿಸಿದರೆ, ಅದರ ಸಂಪೂರ್ಣ ಕಾರಣಸಹಿತ ತೀರ್ಪನ್ನು 15 ದಿನಗಳೊಳಗೆ ಅಪ್‌ಲೋಡ್ ಮಾಡಬೇಕು ಎಂದು ತಿಳಿಸಿದೆ.

ಆದೇಶವನ್ನು ಕಾಯ್ದಿರಿಸಿದ ನಾಲ್ಕು ತಿಂಗಳಾದರೂ ತೀರ್ಪು ಪ್ರಕಟವಾಗದಿದ್ದರೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಅರ್ಜಿದಾರರು ಸಂಬಂಧಿತ ಹೈಕೋರ್ಟನ ಮುಖ್ಯ ನ್ಯಾಯಮೂರ್ತಿಯನ್ನು ಸಂಪರ್ಕಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಮುಕ್ತ ನ್ಯಾಯಾಲಯದಲ್ಲಿ ಸಕಾರಣ ತೀರ್ಪು ಪ್ರಕಟಿಸಿದ ಸಂದರ್ಭದಲ್ಲೂ ಅದನ್ನು 24 ಗಂಟೆಗಳೊಳಗೆ ನ್ಯಾಯಾಲಯದ ಜಾಲತಾಣದಲ್ಲಿ ಪ್ರಕಟಿಸಬೇಕು ಎಂದು ನಿರ್ದೇಶನ ನೀಡಿದೆ.

ಈ ನಿರ್ದೇಶನಗಳು ಯಾವುದೇ ನಿರ್ದಿಷ್ಟ ನ್ಯಾಯಾಧೀಶ ಅಥವಾ ಹೈಕೋರ್ಟನ ತೀರ್ಪಿನ ಕುರಿತು ಆಕ್ಷೇಪ ವ್ಯಕ್ತಪಡಿಸುವ ಉದ್ದೇಶದಿಂದ ನೀಡಲಾಗಿಲ್ಲ. ನ್ಯಾಯಾಂಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಸಮಯೋಚಿತ ನ್ಯಾಯ ಖಚಿತಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸುಪ್ರೀಮ ಕೋರ್ಟ ಸ್ಪಷ್ಟಪಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ