E-PAPER
07 Nov 2026, 03:22:34 PM|
Gold₹14169/gGold24K ₹14,169/g - 22K ₹12,977/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಹುಲ್ ಗಾಂಧಿ ಅವರದ್ದು ಕೇವಲ ವೈಯಕ್ತಿಕ ಅಭಿಯಾನವಲ್ಲ, ದೇಶದ ಧ್ವನಿ : ಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ದೀಪಾವಳಿ ಶುಭಾಶಯ ಕೋರುವ ಮೂಲಕ ಎಲ್ಲರಲ್ಲೂ ಐಕ್ಯತೆ, ಶಾಂತಿ ಮತ್ತು ಪ್ರೀತಿಯ ಸಂದೇಶ ಸಾರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರೊಂದಿಗೆ ನಡೆದ ಚರ್ಚೆ ಹಾಗೂ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದರು.

ರಾಹುಲ್ ಗಾಂಧಿ ಅವರ ರಾಜಕೀಯ ಅಭಿಯಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಇದು ರಾಹುಲ್ ಗಾಂಧಿ ಅವರ ಸ್ವಂತ ಅಭಿಯಾನವಲ್ಲ. ಇದು ದೇಶದ ಅಭಿಯಾನ ಹಾಗೂ ಜನರ ಧ್ವನಿ ಎಂದರು.

ಕಾಂಗ್ರೆಸ್ ಪಕ್ಷವು ದೇಶಕ್ಕೆ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನೀಡಿದೆ. ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಜನರ ಹಕ್ಕುಗಳನ್ನು ರಕ್ಷಿಸುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಇತಿಹಾಸವೇ ದೇಶದ ಇತಿಹಾಸ, ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೆಲ್ಲ ಸಮಾಜದ ಪ್ರತಿಯೊಂದು ವರ್ಗಕ್ಕೂ ಎಲ್ಲವನ್ನೂ ಸಮಾನವಾಗಿ ಹಂಚಿದೆ. ಅದನ್ನು ಮುಂದುವರಿಸಿಕೊಂಡು ಹೋಗುವುದೇ ನಮ್ಮ ದೊಡ್ಡ ಶಕ್ತಿ ಎಂದು ತಿಳಿಸಿದರು.

ಫಲಾನುಭವಿ ಯೋಜನೆಗಳೊಂದಿಗೆ ವೋಟರ್ ಐಡಿ ಜೋಡಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಬಳಿ ಚರ್ಚಿಸಲು ಸಾಕಷ್ಟು ವಿಷಯಗಳಿವೆ. ನಾನೂ ಕೂಡ ಸರ್ಕಾರದ ಭಾಗವಾಗಿದ್ದೇನೆ. ಈ ವಿಷಯವಾಗಿ ಚರ್ಚಿಸಲು ಹಲವು ಅಂಶಗಳಿವೆ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST