Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ರಹಾನೆಗೆ ₹12 ಲಕ್ಷ ದಂಡ – ಕೆಕೆಆರ್‌ಗೆ ಮತ್ತೊಂದು ಆಘಾತ

ಚೆನ್ನೈ: 2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಗೆಲುವಿನ ಖಾತೆ ತೆರೆಯದ Kolkata Knight Riders ತಂಡದ ನಾಯಕ Ajinkya Rahaneಗೆ ಮತ್ತೊಂದು ಶಾಕ್ ಎದುರಾಗಿದೆ. ಚೆನ್ನೈ ವಿರುದ್ಧದ ಸೋಲಿನ ಬೆನ್ನಲ್ಲೇ Board of Control for Cricket in India ₹12 ಲಕ್ಷ ದಂಡ ವಿಧಿಸಿದೆ. ಈವರೆಗೂ ಜಯದ ಸಿಹಿ ಕಾಣದ ಕೆಕೆಆರ್ ತಂಡ ಮಂಗಳವಾರ (ಏ.14) ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಕಾರಣ ರಹಾನೆಗೆ ಈ ದಂಡ ವಿಧಿಸಲಾಗಿದೆ.

ಚೆನ್ನೈಯ M. A. Chidambaram Stadiumನಲ್ಲಿ ನಡೆದ ಪಂದ್ಯದಲ್ಲಿ Chennai Super Kings ವಿರುದ್ಧ ಅಗತ್ಯವಾದ ಓವರ್ ರೇಟ್ ಕಾಯ್ದುಕೊಳ್ಳಲು ವಿಫಲವಾದ ಕಾರಣ, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ಅಡಿಯಲ್ಲಿ ಮೊದಲ ಉಲ್ಲಂಘನೆಗಾಗಿ ₹12 ಲಕ್ಷ ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.ಈ ಆವೃತ್ತಿಯಲ್ಲಿ ಕೆಕೆಆರ್ ಈಗಾಗಲೇ 5 ಪಂದ್ಯಗಳನ್ನು ಆಡಿದ್ದು, ಒಂದಲ್ಲಿಯೂ ಗೆಲುವು ಸಾಧಿಸಿಲ್ಲ. ಮುಂದಿನ ಪಂದ್ಯವನ್ನು ಶುಕ್ರವಾರ (ಏ.17) Gujarat Titans ವಿರುದ್ಧ ಆಡಲಿದೆ.

ನಿನ್ನೆ ನಡೆದ ಪಂದ್ಯದಲ್ಲಿ ಕೆಕೆಆರ್ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಅನ್ಶುಲ್ ಕಂಬೋಜ್ ಎಸೆದ 2ನೇ ಓವರ್‌ನಲ್ಲಿ ಫಿನ್ ಅಲೆನ್ 1 ರನ್‌ಗೆ ಔಟಾದರು. ಬಳಿಕ ಖಲೀಲ್ ಅಹ್ಮದ್ ಎಸೆದ ಓವರ್‌ನಲ್ಲಿ ಸುನಿಲ್ ನರೈನ್ 24 ರನ್ ಗಳಿಸಿ ಪೆವಿಲಿಯನ್ ಸೇರಿದರು. ಮೊದಲ ಪವರ್‌ಪ್ಲೇಯಲ್ಲೇ ಎರಡು ಪ್ರಮುಖ ವಿಕೆಟ್ ಕಳೆದುಕೊಂಡ ಕೆಕೆಆರ್ ಒತ್ತಡಕ್ಕೆ ಸಿಲುಕಿತು.

ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ ತಂಡ 7 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿ ಸೋಲು ಕಂಡಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ