LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ'- ರಾಹುಲ್‌ ಆರೋಪ

ನವದೆಹಲಿ : ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲೂ ರಾಜಕೀಯ ಕೆಸರೆರಚಾಟ ಆರಂಭವಾದದಂತಿದೆ.

ಬೋಧ್‌ ಘಾಟ್‌ನಲ್ಲಿಂದು ಅಂತ್ಯಕ್ರಿಯೆ ನೆರವೇರಿದ ಬಳಿಕ ಕೆರಳಿ ಕೆಂಡವಾದ ರಾಹುಲ್‌ ಗಾಂಧಿ , ನಿಗಮ್ ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರಿಗೆ ಬಿಜೆಪಿ ಅವಮಾನ ಮಾಡಿದೆ ಅಂತ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗಮಬೋಧ್ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಸ್ತುತ ಸರ್ಕಾರ ಅವರಿಗೆ ಸಂಪೂರ್ಣ ಅವಮಾನ ಮಾಡಿದೆ. ಮನಮೋಹನ್‌ ಸಿಂಗ್‌ ಒಂದು ದಶಕದ ಕಾಲ ಭಾರತದ ಪ್ರಧಾನಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ದೇಶವು ಆರ್ಥಿಕ ಮಹಾಶಕ್ತಿಯಾಯಿತು ಮತ್ತು ಅವರ ನೀತಿಗಳು ಇನ್ನೂ ದೇಶದ ಬಡ ಮತ್ತು ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುತ್ತಿವೆ.

ಇಲ್ಲಿಯ ತನಕದ ಎಲ್ಲಾ ಮಾಜಿ ಪ್ರಧಾನಿಗಳ ಘನತೆಯನ್ನು ಗೌರವಿಸಿ, ಅವರ ಅಂತಿಮ ವಿಧಿಗಳನ್ನು ಅಧಿಕೃತ ಸಮಾಧಿಗಳಲ್ಲಿ ನಡೆಸಲಾಯಿತು, ಇದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಅನಾನುಕೂಲತೆ ಇಲ್ಲದೇ ಗೌರವ ಸಲ್ಲಿಸಬದಾಗಿದೆ. ಹಾಗೆಯೇ ದೇಶದ ಈ ಮಹಾನ್ ಪುತ್ರ ಮತ್ತು ಅವರ ಸಮುದಾಯದ ಬಗ್ಗೆ ಸರ್ಕಾರ ಗೌರವ ತೋರಿಸಬೇಕಿತ್ತು. ಆದ್ರೆ ಸಂಪೂರ್ಣ ಅಪಮಾನ ಮಾಡಿದೆ ಎಂದು ಬರೆದುಕೊಂಡಿದ್ದಾರೆ.ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ಅಂತ್ಯ ಸಂಸ್ಕಾರ ನಡೆಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರವೆಸಗಿ ಕೊ*ಲೆಗೈದು ಶವಕ್ಕೆ ಬೆಂಕಿ ಹಚ್ಚಿದ ಕ್ಯಾನ್ಸರ್ ರೋಗಿ'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆ