LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಅದಾನಿ ಅವರನ್ನ ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ'- ರಾಹುಲ್ ಗಾಂಧಿ

ದೆಹಲಿ : ಉದ್ಯಮಿ ಗೌತಮ್ ಅದಾನಿ ಅವರು ಎಂದಿಗೂ ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳುವುದಿಲ್ಲ. ನ್ಯಾಯಯುತವಾಗಿ ಅವರು ಜೈಲಿನಲ್ಲಿರಬೇಕು. ಆದರೆ ಕೇಂದ್ರ ಸರ್ಕಾರವೇ ಅದಾನಿ ಅವರನ್ನ ರಕ್ಷಣೆ ಮಾಡುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ ಅಧಿಕ ಲಂಚದ ಭರವಸೆ ನೀಡಿದ್ದಾರೆ ಎಂಬ ಆರೋಪವನ್ನು ಅದಾನಿ ಸಮೂಹ ತಳ್ಳಿಹಾಕಿದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಅದಾನಿ ಆರೋಪಗಳನ್ನು ಒಪ್ಪಿಕೊಳ್ಳುತ್ತಾರೆ ಎಂದು ನೀವು ಭಾವಿಸುತ್ತೀರಾ? ನಿಸ್ಸಂಶಯವಾಗಿ ಅವರು ಆರೋಪಗಳನ್ನು ನಿರಾಕರಿಸುತ್ತಾರೆ. ಹಾಗಾಗಿ ನಾವು ಹೇಳಿದಂತೆ ಅವರನ್ನು ಬಂಧಿಸಬೇಕು ಎಂದಿದ್ದಾರೆ.

ಸಣ್ಣ ಸಣ್ಣ ಆರೋಪದಲ್ಲಿ ನೂರಾರು ಜನರನ್ನು ಬಂಧಿಸಲಾಗುತ್ತಿದೆ. ಆದರೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸಾವಿರಾರು ಕೋಟಿ ರೂ.ಗಳ ಆರೋಪ ಹೊರಿಸಲ್ಪಟ್ಟಿದೆ. ನ್ಯಾಯಯುತವಾಗಿ ಅವರು ಜೈಲಿನಲ್ಲಿರಬೇಕು, ಆದ್ರೆ ಕೇಂದ್ರ ಸರ್ಕಾರವೇ ಅವರನ್ನು ರಕ್ಷಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು?ತಿರುಪತಿ ತಿರುಮಲ ದರ್ಶನದ ಟಿಕೇಟ್ ವಿತರಣೆ ಹಾಗೂ ಸಮಯ ಬದಲಾವಣೆ; ಇಲ್ಲಿದೆ ಮಾಹಿತಿಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!