Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗೃತೆ ವಹಿಸಿ: ರಾಹುಲ್ ಶಿಂಧೆ

ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಇಲ್ಲಿನ ಜಿಪಂ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಹಮ್ಮಿಕೊಂಡಿದ್ದ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ವಿಡಿಯೋ ಸಂವಾದದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮೇ ತಿಂಗಳ ಅಂತ್ಯದವರೆಗೂ ನೀರಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು, ಡ್ಯಾಮ್, ಬೋರವೆಲ್ ಗಳ ನೀರಿನ ಮಟ್ಟ ಪರಿಶೀಲಿಸಬೇಕು. ನೀರಿನ ಮಿತಬಳಕೆ ಹಾಗೂ ಕಾಯ್ದಿಟ್ಟುಕೊಳ್ಳುವುದಕ್ಕೆ ಒತ್ತು ನೀಡಬೇಕು ಎಂದು ಸೂಚಿಸಿದರು.

ಸಂಬಂಧಪಟ್ಟ ಇಲಾಖೆಯ ಎಲ್ಲ ತಾಲೂಕಾ ಹಾಗೂ ಗ್ರಾಪಂಮಟ್ಟದ ಅಧಿಕಾರಿಗಳು ನೀರಿನ ಕೊರತೆಯಾಗುವಂತಹ ಗ್ರಾಮಗಳಿಗೆ ಈ ವಾರದಲ್ಲಿ ಭೇಟಿ ನೀಡಿ ಪರಿಶೀಲಿಸಿ, ಪೂರ್ವಸಿದ್ಧತೆ ಕೈಗೊಳ್ಳಬೇಕು. ನೀರಿನ ಸೂಕ್ತ ಬಳಕೆಯ ಕುರಿತು ಗ್ರಾಮಸ್ಥರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲ ಗ್ರಾಮಗಳಲ್ಲಿನ ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿರುವ ಕುರಿತು ದಿನಾಂಕಗಳನ್ನು ಬರೆಯಿಸಬೇಕು. ನೀರಿನ ಮಾದರಿ ಪರೀಕ್ಷೆಗಳನ್ನು ಕೈಗೊಳ್ಳಬೇಕು. ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು. ರೋಗ-ರುಜಿನಗಳು ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಬಹುತೇಕ ಎಲ್ಲ ಗ್ರಾಪಂಗಳಲ್ಲೂ ಕುಡಿಯುವ ನೀರಿನ ಟ್ಯಾಂಕರ್ ಗಳು ಈಗಾಗಲೇ ಇವೆ. ಟ್ಯಾಂಕರ್ ಗಳು ಬೇಸಿಗೆ ಅವಧಿಯಲ್ಲಿ ಸಿದ್ಧವಾಗಿರುವಂತೆ ಕ್ರಮವಹಿಸಿ. ಅಗತ್ಯವಿರುವ ಕಡೆ ಕೂಡಲೇ ನೀರಿನ ಪೂರೈಕೆ ಮಾಡಿ. ಸಮರ್ಪಕ ನಿರ್ವಹಣೆ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ಎಲ್ಲ ತಾಲೂಕುಗಳಲ್ಲಿ ಈ ವಾರದಲ್ಲಿ ಕುಡಿಯುವ ನೀರಿನ ಟಾಸ್ಕಪೋರ್ಸ್ ಸಭೆಗಳನ್ನು ನಡೆಸಿ, ವರದಿ ಸಲ್ಲಿಸಿ. ಶಾಲಾ-ಕಾಲೇಜುಗಳು, ಅಂಗನವಾಡಿಗಳು ಹಾಗೂ ವಸತಿ ನಿಲಯಗಳಿಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಕ್ರಮವಹಿಸಿ ಹಾಗೂ ನೀರಿನ ಮಿತ ಬಳಕೆಯ ಕುರಿತು ವಿದ್ಯಾರ್ಥಿಗಳಲ್ಲೂ ಜಾಗೃತಿ ಮೂಡಿಸಿ ಎಂದು ಸೂಚನೆ ನೀಡಿದರು.

ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ತಿಂಗಳ ನಾಲ್ಕನೇ ಭಾನುವಾರ ಸ್ವಚ್ಛತಾ ಅಭಿಯಾನ ಆಂದೋಲನ ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದ ಅಂಗವಾಗಿ ರೂಪಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ಉಪಕಾರ್ಯದರ್ಶಿ (ಆಡಳಿತ), ಬಸವರಾಜ ಹೆಗ್ಗನಾಯಕ್, ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ್ ಸೇರಿ ಎಲ್ಲ ತಾಲೂಕಾ ಪಂಚಾಯತ ಆಡಳಿತಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ