LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜು.1ರಿಂದ ರೈಲ್ವೇ ಟಿಕೆಟ್ ದರ 1 ಕಿ.ಮೀ.ಗೆ 1 ಪೈಸೆ ಹೆಚ್ಚಳ

ನವದೆಹಲಿ : ಹಲವಾರು ವರ್ಷಗಳಿಂದ ಒಂದೇ ದರವನ್ನು ನಿರ್ವಹಿಸುತ್ತಿದ್ದ ಭಾರತೀಯ ರೈಲ್ವೇ ಈಗ ರೈಲು ಟಿಕೆಟ್ ದರವನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ. ಜುಲೈ 1ರಿಂದ ಎಸಿ, ಎಸಿ ರಹಿತ, ಎಕ್ಸ್ಪ್ರೆಸ್ ಹಾಗೂ ದ್ವಿತೀಯ ದರ್ಜೆ ರೈಲುಗಳ ಟಿಕೆಟ್ ದರದಲ್ಲಿ ಏರಿಕೆ ಮಾಡಲು ಇಲಾಖೆ ಮುಂದಾಗಿದೆ.

ದರಗಳು ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪ್ರಯಾಣಿಕರಿಗೆ ಹೊರೆಯಾಗುವುದಿಲ್ಲ ಎಂದು ರೈಲ್ವೇ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಉಪನಗರ ರೈಲು ಹಾಗೂ ಮಾಸಿಕ ಪಾಸ್ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕೂಡ ಅಧಿಕಾರಿ ಮಾಹಿತಿ ನೀಡಿದ್ದಾರೆ. ರೈಲ್ವೇ ವೆಚ್ಚ ನಿರ್ವಹಣೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಂಡಿದ್ದು, ರೈಲ್ವೇ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ಅದರಂತೆ ಸಚಿವಾಲಯದಲ್ಲಿ ಈ ಬಗೆಗಿನ ಮಾತುಕತೆ ಅಂತಿಮ ಹಂತದಲ್ಲಿದ್ದು, ಇನ್ನೊಂದು ವಾರದೊಳಗೆ ನಿರ್ಣಯ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಎಸಿ ರಹಿತ, ಎಕ್ಸ್ಪ್ರೆಸ್ ರೈಲು ಪ್ರತೀ ಕಿ.ಮೀ.ಗೆ 1 ಪೈಸೆ, ಎಸಿ ರೈಲುಗಳ ಟಿಕೆಟ್ಗೆ ಪ್ರತೀ ಕಿ.ಮೀ.ಗೆ 2 ಪೈಸೆ, 2ನೇ ದರ್ಜೆ ರೈಲು ಟಿಕೆಟ್ನಲ್ಲಿ 500 ಕಿ.ಮೀ.ವರೆಗೆ ಹೆಚ್ಚಳ ಇಲ್ಲ, 500 ಕಿ.ಮೀ. ದಾಟಿದ ಬಳಿಕ ಕಿ.ಮೀ.ಗೆ ಅರ್ಧ ಪೈಸೆ ಏರಿಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026