ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ.!
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ, ಕೊಡಗು , ಹಾಸನ, ಬೆಂಗಳೂರು ನಗರ, ತುಮಕೂರು, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಭಾಗದಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು, ನಾಳೆ ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ. ಇನ್ನುಳಿದ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.