LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಳೆಯ ಆರ್ಭಟ: ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ .!

 

ಬೆಂಗಳೂರು:  ವಿವಿಧೆಡೆ ಬಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಗಸ್ಟ್ 18ರಂದು ಈ ಜಿಲ್ಲೆಗಳ ಶಾಲೆಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ 10 ತಾಲೂಕುಗಳಲ್ಲಿ ನಾಳೆ ರಜೆ ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ. ಶಿರಸಿ. ಸಿದ್ದಾಪುರ. ಯಲ್ಲಾಪುರ, ದಾಂಡೇಲಿ. ಜೋಯಿಡಾ ತಾಲೂಕುಗಳಲ್ಲಿ ನಾಳೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರಜೆ ಘೋಷಿಸಿ ಆದೇಶಿಸಿದ್ದಾರೆ. ಮುಂಡಗೋಡ, ಹಳಿಯಾಳ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಇರುವುದಿಲ್ಲ.

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲೂಕುಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಆಗಸ್ಟ್ 18ರಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷ್ಠಿಸಲಾಗಿದ್ದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೊಡಗು

ಕೊಡಗು ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜೋರು ಗಾಳಿ ಮಳೆಯಾಗುವ ಹಿನ್ನೆಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಸಾಗರ, ಹೊಸನಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ ತಹಶೀಲ್ದಾರ್ ಗಳು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026