Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ -ಮುನ್ಸೂಚನೆ


ಬೆಂಗಳೂರು : ರಾಜ್ಯದ ಜನತೆಗೆ ಹವಾಮಾನ ಇಲಾಖೆ (IMD) ಮಹತ್ವದ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ, ಗುಡುಗು ಸಹಿತ ಬಿರುಗಾಳಿ ಹಾಗೂ ಆಲಿಕಲ್ಲು ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಈ ಹವಾಮಾನ ಬದಲಾವಣೆ ಕಂಡುಬರಲಿದ್ದು, ಮೇ 3ರ ವರೆಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ತುಮಕೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.
ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಬಹುದು ಹಾಗೂ ಬಲವಾದ ಗಾಳಿ ಬೀಸುವ ಕುರಿತು ಐಎಂಡಿ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆವೆಂದು ಹೇಳಿದೆ.

ಮೇ 1: ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಲಿದ್ದರೂ, ಬೆಂಗಳೂರು, ತುಮಕೂರು ಮತ್ತು ಚಿತ್ರದುರ್ಗ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಭಾಗಗಳು ಕ್ರಮೇಣ ಒಣಹವೆಯತ್ತ ಮರಳಲಿವೆ.
ಮೇ 2: ಮೈಸೂರು, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರಿಗೆ ಮಾತ್ರ ಮಳೆ ಸೀಮಿತವಾಗಲಿದೆ. ಉಳಿದ ಭಾಗಗಳಲ್ಲಿ ವಾತಾವರಣ ಸಹಜ ಸ್ಥಿತಿಗೆ ಬರಲಿದೆ.
ಮೇ 3: ಈ ಮಳೆಯ ಅವಧಿಯ ಅಂತ್ಯದ ಮುನ್ಸೂಚನೆಯಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕೊಡಗಿನ ಕೆಲವು ಕಡೆಗಳಲ್ಲಿ ಮಾತ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹೊಸ ಮಳೆ ಮಾದರಿಯ ಪತ್ತೆ
ಸ್ವತಂತ್ರ ಹವಾಮಾನ ವಿಶ್ಲೇಷಕ ಸಂಸ್ಥೆ ‘ನಮ್ಮ ಕರ್ನಾಟಕ ವೆದರ್’ ಪ್ರಕಾರ, ತಿರುಪತಿಯಿಂದ ಸತ್ಯಮಂಗಲದವರೆಗೆ ಮೋಡಗಳ ಚಟುವಟಿಕೆ ಹೆಚ್ಚುತ್ತಿದೆ. ಈ ಪಟ್ಟಿಯಲ್ಲಿ ಹೊಸ ಮಳೆ ಮಾದರಿಯು ಬಲಗೊಳ್ಳುತ್ತಿದ್ದು, ಇದರ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಮೇ 4ರವರೆಗೆ ಅಸ್ಥಿರ ಹವಾಮಾನ ಮುಂದುವರಿಯಲಿದೆ. ಮೇ 1 ರಿಂದ ಮೇ 4 ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಹಗಲಿನಲ್ಲಿ 35-36°C ಹಾಗೂ ರಾತ್ರಿಯ ವೇಳೆಯಲ್ಲಿ 21-23°C ತಾಪಮಾನವಿರಲಿದೆ ಎಂದು ಹೇಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ