LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 26 ರವರೆಗೆ ಮಳೆಯ ಅಬ್ಬರ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 26 ರವರೆಗೆ ಮಳೆಯಾಗಲಿರುವ ಸಾದ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ 5 ದಿನಗಳವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ತುಮಕೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಗುಡುಗು ಮಿಂಚಿನ ಅಬ್ಬರವಿರಲಿದೆ ಎನ್ನಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಬೆಂಗಳೂರಿನ ಹೆಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಒಟ್ಟಿನಲ್ಲಿ ಮುಂದಿನ 5 ದಿನಗಳವರೆಗೆ ಮಳೆರಾಯ ಆರ್ಭಟಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026