LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾ. 11 ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದೆ. ಹೀಗಿರುವಾಗಲೇ ಮಾರ್ಚ್ 11ರಿಂದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಕ್ಯಾಲೆಂಡರ್ ಪ್ರಕಾರ ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಅವಧಿಯಾಗಿದೆ. ಈ ಅವಧಿಯಲ್ಲಿ ಬಿಸಿಲ ತಾಪಕ್ಕೆ ಮಳೆಯಾಗಲಿದೆ. ಅದೇ ರೀತಿ ವಾತಾವರಣ ಸೃಷ್ಟಿಯಾಗಿದ್ದು, ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14ರ ವರೆಗೆ ಮೂರು ದಿನ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ 14ರವರೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
08-01-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!ಇಂದಿನ ವಚನ : ವಚನ ಭಂಡಾರಿ ಶಾಂತರಸ !ಅಳಿವಿನಂಚಿನಲ್ಲಿರುವ 15 ಭಾರತೀಯ ರಣಹದ್ದುಗಳ ಬಿಡುಗಡೆರಾಜ್ಯಾದ್ಯಂತ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸಲು ಮುಂದಾದ ಸರ್ಕಾರರೈಲ್ವೆ ಇಲಾಖೆ ಮಹತ್ವದ ನಿರ್ಧಾರ - ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಆಧಾರ್ ಲಿಂಕ್ ಕಡ್ಡಾಯಸಿಂಹ ರಾಶಿ ವರ್ಷ ಭವಿಷ್ಯ 2026: ಈ ವರ್ಷ ಸಿಂಹ ರಾಶಿಗೆ ಅದೃಷ್ಟದ ಮಳೆ!ಕಾರು ಪಲ್ಟಿ: ಕಾರು ಸಹಿತ ಇಬ್ಬರ ದಹನ22 ವರ್ಷಕ್ಕೆ ಯುಪಿಎಸ್‌ಸಿ ಪಾಸ್‌, ಮೋನಿಕಾ ಯಾದವ್ ಅವರ ಸ್ಫೂರ್ತಿದಾಯಕ ಕಥೆರೈತರಿಗೆ ಗುಡ್ ನ್ಯೂಸ್ .! ನಿಮ್ಮ ಜಮೀನಿನ ಇ-ಖಾತಾವನ್ನು ಮನೆಯಲ್ಲಿ ಪಡೆಯಿರಿ.! ಹೇಗೆ ಅಂತೀರ.?ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ಬಗ್ಗೆ ಮಾಹಿತಿ.!