Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಧ್ವನಿ ಎತ್ತಿ: ಯುವಜನತೆಗೆ ರಾಹುಲ್ ಕರೆ

ಹೊಸದಿಲ್ಲಿ, ಸೆ. 29 :  - ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಲೈಂಗಿಕ ಕಿರುಕುಳದ ವಿರುದ್ಧ ಯುವಜನತೆ, ವಿಶೇಷವಾಗಿ ‘ಜೆನ್‌ ಝಡ್‌’ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಧ್ವನಿ ಎತ್ತಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಮಹಿಳೆಯರ ಸುರಕ್ಷತೆಗಾಗಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳಿಗೆ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನದಲ್ಲಿ 17 ವರ್ಷದ ಬಾಲಕಿಯ ಮೇಲೆ ನಡೆದಿದೆಯೆನ್ನಲಾದ ಸಾಮೂಹಿಕ ಅತ್ಯಾಚಾರದ ಪ್ರಕರಣದ ಬಳಿಕ ದಿಲ್ಲಿ ವಿಶ್ವವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳೆಯರಿಗೆ ಸುರಕ್ಷಿತ ಸಾರ್ವಜನಿಕ ಸ್ಥಳಗಳು, ಉತ್ತಮ ಬೀದಿ ದೀಪಗಳ ವ್ಯವಸ್ಥೆ ಹಾಗೂ ಅಪರಾಧಿಗಳ ವಿರುದ್ಧ ಪರಿಣಾಮಕಾರಿ ಕ್ರಮಕ್ಕೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಗಳಿಗೆ ಬೆಂಬಲ ಸೂಚಿಸಿರುವ ರಾಹುಲ್ ಗಾಂಧಿ, ಮಹಿಳೆಯರ ಸುರಕ್ಷತೆ ಹೆಸರಿನಲ್ಲಿ ಅವರ ಸ್ವಾತಂತ್ರ್ಯವನ್ನು ನಿರ್ಬಂಧಿಸುವುದು ಪರಿಹಾರವಲ್ಲ ಎಂದು ಹೇಳಿದ್ದಾರೆ. ಅಪರಾಧಕ್ಕೆ ಒಳಗಾದ ಮಹಿಳೆಯರನ್ನೇ ದೂಷಿಸುವ ಪ್ರವೃತ್ತಿ ಕೊನೆಗೊಳ್ಳಬೇಕು. ಮಹಿಳೆಯರು ನಿರ್ಭಯವಾಗಿ ಸಂಚರಿಸುವಂತಹ ಸುರಕ್ಷಿತ ವಾತಾವರಣ ನಿರ್ಮಿಸುವುದು ಆಡಳಿತದ ಹೊಣೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ಮಹಿಳೆಯರ ವಿರುದ್ಧ ಅಪರಾಧ ನಡೆದಾಗ ಅವರನ್ನೇ ಮನೆಯೊಳಗೆ ಇರುವಂತೆ ಹೇಳುವುದು ಪರಿಹಾರವಲ್ಲ. ಅಪರಾಧಿಗಳನ್ನು ಶಿಕ್ಷಿಸಿ, ಬೀದಿಗಳನ್ನು ಮಹಿಳೆಯರಿಗೆ ಸುರಕ್ಷಿತಗೊಳಿಸಬೇಕು” ಎಂಬ ಆಶಯವನ್ನು ರಾಹುಲ್ ವ್ಯಕ್ತಪಡಿಸಿದ್ದಾರೆ. ಯುವಜನತೆ ಸಂಘಟಿತವಾಗಿ ಧ್ವನಿ ಎತ್ತಿದಾಗ ಆಡಳಿತದ ಮೇಲೆ ಕ್ರಮ ಕೈಗೊಳ್ಳುವ ಒತ್ತಡ ಹೆಚ್ಚುತ್ತದೆ ಎಂದೂ ಅವರು ಹೇಳಿದ್ದಾರೆ.

ದಿಲ್ಲಿಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಕಳೆದ ಒಂದು ವಾರದಿಂದ ವಿದ್ಯಾರ್ಥಿಗಳ ಪ್ರತಿಭಟನೆಗಳು ನಡೆಯುತ್ತಿದ್ದು, ಸೋಮವಾರ ನಡೆದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಹಿಳೆಯರು ಭಯವಿಲ್ಲದೆ ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಜೀವನದಲ್ಲಿ ಪಾಲ್ಗೊಳ್ಳುವ ವಾತಾವರಣ ನಿರ್ಮಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ