Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಡಿಕೆ ಸಿಪ್ಪೆ ಸಾವಯವ ಗೊಬ್ಬರವಾಗಿ ಮಾರ್ಪಾಡು- ರಜನೀಕಾಂತ.ಆರ್

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸೂಕ್ಷ್ಮಜೀವಾಣುಗಳಿರುವ ಕಾಂಪೋಷ್ಟ್ ಕಲ್ಚರ್ ಬಳಸಿ ಮೌಲ್ಯಯುತ ಸಾವಯವ ಗೊಬ್ಬರವಾಗಿ ಪರಿವರ್ತಿಸಬಹುದಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ.ಆರ್ ಹೇಳಿದರು.


ಭರಮಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಅಂಗವಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ವತಿಯಿಂದ ಆಯೋಜಿಸಲಾದ ಕೃಷಿಯಲ್ಲಿ ಜೈವಿಕ ಗೊಬ್ಬರ, ಜೈವಿಕ ಪೀಡೆನಾಶಕಗಳ ಬಳಕೆ ಮತ್ತು ಅಡಿಕೆ ಸಿಪ್ಪೆ ಕಾಂಪೋಸ್ಟಿಂಗ್ ಕುರಿತ ಹೊರಾಂಗಣ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಡಿಕೆ ಬೆಳೆಯು ಪ್ರಮುಖ ತೋಟಗಾರಿಕಾ ವಾಣಿಜ್ಯ ಬೆಳೆಯಾಗಿದ್ದು, ಕಳೆದ 10 ವರ್ಷಗಳಲ್ಲಿ ಇದರ ವಿಸ್ತೀರ್ಣ ದುಪ್ಪಟ್ಟಾಗಿದೆ. ಅಡಿಕೆ ಸಿಪ್ಪೆಯು ಕೊಳೆಯಲು 2-3 ವರ್ಷಗಳು ಬೇಕಾಗಿರುವುದರಿಂದ ರೈತರು ಇದರ ವಿಲೇವಾರಿಗೆ ಇದನ್ನು ಸುಡುವುದು, ರಸ್ತೆ ಬದಿ ಹಾಕುವುದು ಮತ್ತು ಕೆರೆಗಳಿಗೆ ಸುರಿಯುತ್ತಿರುವುದರಿಂದ ನೀರು ಮತ್ತು ಪರಿಸರ ಮಾಲಿನ್ಯವಾಗುತ್ತಿದೆ.

ಜೈವಿಕ ಗೊಬ್ಬರಗಳು ಎಂದರೆ ಸಜೀವ ಸೂಕ್ಷ್ಮಜೀವಿಗಳನ್ನು ಒಳಗೊಂಡ ಗೊಬ್ಬರಗಳು. ಇವು ಮಣ್ಣಿನಲ್ಲಿ ಪೋಷಕಾಂಶಗಳನ್ನು ಸಸ್ಯಗಳಿಗೆ ಲಭ್ಯವಾಗುವಂತೆ ಮಾಡುತ್ತವೆ. ಮಣ್ಣಿನ ಜೀವಶಕ್ತಿ ಹೆಚ್ಚಿಸುತ್ತವೆ, ರಾಸಾಯನಿಕ ಗೊಬ್ಬರ ಅವಲಂಬನೆ ಕಡಿಮೆಮಾಡಿ ಕೃಷಿಯ ವೆಚ್ಚವನ್ನು ತಗ್ಗಿಸುತ್ತವೆ. ಮುಂದಿನ ಪೀಳಿಗೆಗೆ ಆರೋಗ್ಯಕರ ಸಜೀವ ಮಣ್ಣು ಉಳಿಸಲು ಮತ್ತು ಸುಸ್ಥಿರ ಇಳುವರಿ ಪಡೆಯಲು ಸಾವಯವ ಮತ್ತು ನೈಸರ್ಗಿಕ ಕೃಷಿಗೆ ರೈತರು ಆದ್ಯತೆ ನೀಡುವಂತೆ ರಜನೀಕಾಂತ.ಆರ್ ಕೋರಿದರು.

ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ರೈತರು ಬಲಿಷ್ಠರಾಗದ ಹೊರತು ದೇಶದ ಅಭಿವೃದ್ಧಿ ಅಸಾಧ್ಯ ಎಂದು ನಂಬಿದ್ದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ರೈತರ ಸಬಲೀಕರಣಕ್ಕಾಗಿ ಹಲವು ಕಾನೂನು, ಕೃಷಿ ಸುಧಾರಣೆಗಳು, ನೀತಿಗಳನ್ನು ರೂಪಿಸಿದ್ದರು.

ಇವರ ಗೌರವಾರ್ಥವಾಗಿ 2001 ರಲ್ಲಿ ಭಾರತ ಸರ್ಕಾರವು ಡಿಸೆಂಬರ್ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ರಾಷ್ಟ್ರೀಯ ರೈತರ ದಿನವನ್ನು ಆಚರಿಸುತ್ತಾ ಬರಲಾಗುತ್ತದೆ ಎಂದು ರಜನೀಕಾಂತ.ಆರ್ ತಿಳಿಸಿದರು.

ತುಮಕೂರಿನ ಮಲ್ಟಿಪ್ಲೇಕ್ಸ ಬಯೋಟೆಕ್ ಪ್ರೈ ಲಿ ನ ತಾಂತ್ರಿಕ ಮುಖ್ಯಸ್ಥ ಎಸ್.ಕುಮಾರ್ ಮತ್ತು ಗಿರಿಧರ್.ಜಿ, ಕೆನರಾ ಬ್ಯಾಂಕಿನ ಹಣಕಾಸು ಸಾಕ್ಷರತಾ ಕೇಂದ್ರದ ಆರ್ಥಿಕ ಸಮಾಲೋಚಕ ವಿ.ತಿಪ್ಪೇಸ್ವಾಮಿ ರೈತರಿಗೆ ಅರಿವು ಮೂಡಿಸಿದರು.

 ಕೋಗುಂಡೆ ಗ್ರಾಮದ ರೈತ ಹೆಚ್ ಸಿ ಲೋಕೇಶ್ ತಮ್ಮ ಅನುಭವ ಹಂಚಿಕೊಂಡರು. ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಅಖಂಡ ಕರ್ನಾಟಕದ ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶಾಂತ ಅಶೋಕ್,

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಪೂರ್ಣಶ್ರೀ ಎಂ ಬಡಿಗೇರ, ಕೃಷಿ ಅಧಿಕಾರಿ ಪವಿತ್ರಾ.ಎಂ.ಜೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವಿನಯ್, ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ದೇಶಕರಾದ ಚಿಕ್ಕಬೆನ್ನೂರಿನ ಕೆ ಸಿ ಕುಮಾರ್, ಕೋಡಿ ರಂಗವ್ವನಹಳ್ಳಿಯ ಜಿ ಸಿ ಶಿವಕುಮಾರ್, ಚೌಲಿಹಳ್ಳಿಯ ಶೈಲೇಶ್ ಕುಮಾರ್, ಪ್ರಶಾಂತ್ ಮತ್ತು ವಿವಿಧ ಗ್ರಾಮಗಳಿಂದ ಆಗಮಿಸಿದ ಆಸಕ್ತ 85 ಕ್ಕೂ ಹೆಚ್ಚಿನ ರೈತ ಮಹಿಳೆಯರು ಮತ್ತು ರೈತರು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ