ತುಮಕೂರು, ಜೂ16: ಹುಳಿಯಾರು ಪಟ್ಟಣ ಪಂಚಾಯ್ತಿ ಆಗಿದ್ದು, ಈ ಊರಿಗೆ ಸುಮಾರು 35 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸುಮಾರು ಹಳ್ಳಿಗಳಿದ್ದು ಪ್ರತಿದಿನ ಈ ಊರಿಗೆ ಸಾವಿರಾರು ಜನರು ಬಂದು ಹೋಗುತ್ತಿದ್ದು, ನಾಡ ಕಛೇರಿ ಸೇರಿದಂತೆ ಇತರೆ ಇಲಾಖೆಗಳು ಆಸ್ಪತ್ರೆಗಳು ಇಲಾಖೆಗಳಿದ್ದು ಪ್ರತಿದಿನ ಕೂಲಿ ಕಾರ್ಮಿಕರು, ಅಂಗವಿಕಲರು ಬರುತ್ತಾರೆ, ಇವರೆಲ್ಲರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹುಳಿಯಾರು ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಅವಶ್ಯಕತೆ ಇದ್ದು ಇದನ್ನು ಮಂಜೂರು ಮಾಡಿಕೊಡಬೇಕೆಂದು ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಸದಸ್ಯ ಧನುಷ್ ರಂಗನಾಥ್ ಮನವಿ ಮಾಡಿದರು
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.