Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಅತ್ಯಾಚಾರ ಪ್ರಕರಣದ ಅಪರಾಧಿ ರಾಮ್ ರಹೀಮ್‌ಗೆ ಮತ್ತೆ 30 ದಿನ ಪೆರೋಲ್‌ ಮಂಜೂರು

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಹರಿಯಾಣದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೊಮ್ಮೆ ಪೆರೋಲ್‌ ಮಂಜೂರಾಗಿದೆ. 2017ರಲ್ಲಿ ಜೈಲು ಸೇರಿದ ಬಳಿಕ 16ನೇ ಬಾರಿ 30 ದಿನಗಳ ಕಾಲ ತಾತ್ಕಾಲಿಕ ಬಿಡುಗಡೆ ನೀಡಲಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ರಾಮ್ ರಹೀಮ್‌ಗೆ 2017ರಿಂದಲೂ ಇದು 16ನೇ ಪೆರೋಲ್‌ ಆಗಿದೆ. 30 ದಿನಗಳ ಅವಧಿಗೆ ನೀಡಲಾದ ಈ ಪೆರೋಲ್‌ ವೇಳೆ ಆತ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯ ಕಚೇರಿಯಲ್ಲೇ ವಾಸ್ತವ್ಯ ಹೂಡಲಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಮ್ ರಹೀಮ್‌ಗೆ ಪದೇಪದೇ ಪೆರೋಲ್‌ ಸೌಲಭ್ಯ ದೊರೆಯುತ್ತಿದ್ದು, ಈ ವರ್ಷದ ಜನವರಿಯಲ್ಲೂ 15ನೇ ಬಾರಿ ಪೆರೋಲ್‌ ನೀಡಲಾಗಿತ್ತು. ಅದಕ್ಕೂ ಮೊದಲು 2025ರ ಆಗಸ್ಟ್‌ನಲ್ಲಿ 40 ದಿನ, ಏಪ್ರಿಲ್‌ನಲ್ಲಿ 21 ದಿನ ಹಾಗೂ ಜನವರಿಯಲ್ಲಿ 30 ದಿನಗಳ ಕಾಲ ಬಿಡುಗಡೆ ಸೌಲಭ್ಯ ಮಂಜೂರಾಗಿತ್ತು.

ಡೇರಾ ಸಚ್ಚಾ ಸೌದಾದ ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 2017ರಲ್ಲಿ ರಾಮ್ ರಹೀಮ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ 2019ರಲ್ಲಿ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದಲ್ಲೂ ಆತನಿಗೆ ಹಾಗೂ ಇತರ ಮೂವರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿತ್ತು.

ಈ ಹಿಂದೆ ಪಂಜಾಬ್‌, ಹರಿಯಾಣ ಹಾಗೂ ಸುತ್ತಮುತ್ತಲಿನ ರಾಜ್ಯಗಳಲ್ಲಿ ಚುನಾವಣೆ ನಡೆದ ಸಂದರ್ಭಗಳಲ್ಲಿಯೂ ರಾಮ್ ರಹೀಮ್‌ಗೆ ಪೆರೋಲ್‌ ನೀಡಲಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಹರಿಯಾಣ ಉಪಚುನಾವಣೆ ವೇಳೆ 40 ದಿನಗಳ ಪೆರೋಲ್‌ ನೀಡಲಾಗಿದ್ದರೆ, ಅದಕ್ಕೂ ಮೊದಲು 2020ರ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲೂ 40 ದಿನಗಳ ಬಿಡುಗಡೆ ಸೌಲಭ್ಯ ದೊರಕಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿಯೂ ಪೆರೋಲ್‌ ಮಂಜೂರಾಗಿತ್ತು.

ಚುನಾವಣೆ ಅವಧಿಯಲ್ಲಿ ಪೆರೋಲ್‌ ನೀಡಲಾಗಿದ್ದರೂ, ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು, ಸಾರ್ವಜನಿಕ ಭಾಷಣ ಮಾಡುವುದು ಹಾಗೂ ಚುನಾವಣೆ ನಡೆಯುವ ರಾಜ್ಯಗಳಲ್ಲಿ ತಂಗುವುದು ಸೇರಿದಂತೆ ಹಲವು ನಿರ್ಬಂಧಗಳನ್ನು ರಾಮ್ ರಹೀಮ್ ಮೇಲೆ ವಿಧಿಸಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ