ರಶ್ಮಿಕಾ ಮಂದಣ್ಣ ಅವರು ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ. ಇಂದು (ಫೆಬ್ರವರಿ 14) ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ಅವರು ಈ ಮಾತನ್ನು ಹೇಳಿದರು. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಹೇಳಿದ್ದಾರೆ. ಈ ವಿಚಾರದಲ್ಲಿ ಅವರನ್ನು ವಹಿಸಿಕೊಂಡು ಮಾತನಾಡಿದವರು ಕಡಿಮೆ.
‘ನಾನು ಹೈದರಾಬಾದ್ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದುಕೊಳ್ಳುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ.
‘ರಶ್ಮಿಕಾ ಯಾವಾಗ ಹೈದರಾಬಾದ್ನವರಾದರು? ಇದನ್ನು ಜನನ ಪ್ರಮಾಣಪತ್ರದಲ್ಲಿ ಸೇರಿಸಿದ್ದಾರಾ’ ಎಂದು ಕೆಲವರು ಕೇಳಿದ್ದಾರೆ. ಇನ್ನೂ ಕೆಲವರು, ‘ವಿಜಯ್ ದೇವರಕೊಂಡ ಅವರನ್ನು ವಿವಾಹ ಆಗುವ ಮೊದಲೇ ರಶ್ಮಿಕಾ ಹೈದರಾಬಾದ್ನವರಾಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ‘ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ‘ನಿಮ್ಮನ್ನು ದ್ವೇಷಿಸಲು ನಿತ್ಯ ಹೊಸ ಹೊಸ ಕಾರಣ ನೀಡುತ್ತೀರಿ’ ಎಂದು ಕೆಲವರು ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಈ ರೀತಿಯ ಹೇಳಿಕೆಯನ್ನು ಈ ಮೊದಲಿನಿಂದಲೂ ನೀಡುತ್ತಾ ಬರುತ್ತಿದ್ದಾರೆ. ಈ ಮೊದಲು ಅವರು ‘ನನಗೆ ಕನ್ನಡವೂ ಬರಲ್ಲ’ ಎಂದು ಸಂದರ್ಶನ ಒಂದರಲ್ಲಿ ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಅವರ ಮೇಲೆ ದ್ವೇಷ ಹೆಚ್ಚುತ್ತಿದೆ.