Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ

 

ಬೆಳಗಾವಿ :
ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆ” ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು “ಜುಲೈ-೨೦೨೩” ರಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ ಮಾಡಲಾಗುವುದು.
ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ ವಿವರ:
ಅಂತ್ಯೋದಯ (ಎಎವೈ) ಪ್ರತಿ ಪಡಿತರ ಚೀಟಿಗೆ ಅಕ್ಕಿ-೩೫ ಕೆ.ಜಿ. ಉಚಿತ, ಪಿ.ಎಚ್.ಎಚ್ (ಬಿಪಿಎಲ್) (ಆದ್ಯತಾ)ಪ್ರತಿ ಸದಸ್ಯರಿಗೆ ಅಕ್ಕಿ-೦೫ ಕೆ.ಜಿ. ಉಚಿತ, ಎನ್‌ಪಿಹೆಚ್‌ಹೆಚ್ (ಎಪಿಎಲ್) (ಆದ್ಯತೇತರ) (ಒಪ್ಪಿತ ಪಡಿತರ ಚೀಟಿ) - ಏಕ ಸದಸ್ಯ ಪಡಿತರ ಚೀಟಿಗೆ ಅಕ್ಕಿ-೦೫ ಕೆ.ಜಿ, ೨ ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ಅಕ್ಕಿ-೧೦ ಕೆ.ಜಿ. ಪ್ರತಿ ಕೆ.ಜಿ.ಗೆ ರೂ.೧೫/- ಇರಲಿದೆ.
ಅಂತರ್‌ರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯವವರಿಗೆ ಕೇಂದ್ರ ಸರ್ಕಾರದ ಪಡಿತರ ವಿತರಣಾ ಪ್ರಮಾಣ ೫ ಕೆ.ಜಿ ಪ್ರತಿ ಸದಸ್ಯರಿಗೆ ಉಚಿತವಾಗಿರುತ್ತದೆ.
ಜುಲೈ-೨೦೨೩ನೇ ಮಾಹೆಯ ಅಂತ್ಯದೊಳಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಜಿಲ್ಲೆಯ ಅಂತ್ಯೋದಯ ಮತ್ತು ಆದ್ಯತಾ(ಬಿ.ಪಿ.ಎಲ್) ಪಡಿತರ ಚೀಟಿದಾರರಿಗೆ ಹೊಸ ಸರಕಾರ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ೦೫ ಕೆ.ಜಿ ಅಕ್ಕಿ ಬದಲಾಗಿ ಪ್ರತಿ ಕೆ.ಜಿ ಗೆ ರೂ.೩೪/-ರಂತೆ ನೇರವಾಗಿ ಸಂಬಂಧಪಟ್ಟ ಫಲಾನುಬವಿಗೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಪಡಿತರ ಚೀಟಿಯಲ್ಲಿರುವ ಕುಟುಂಬ ಮುಖ್ಯಸ್ಥರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಪೋಸ್ಟ ಆಫೀಸಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿರತಕ್ಕದ್ದು ಹಾಗೂ ಸದರ ಉಳಿತಾಯ ಖಾತೆ ಇ-ಕೆ.ವೈ.ಸಿ ಮಾಡಿಕೊಂಡಿರತಕ್ಕದ್ದು, ಅಲ್ಲದೆ ಕಳೆದ ಮೂರು ತಿಂಗಳಿನಿಂದ ಸತತವಾಗಿ ಪಡಿತರ ಪಡೆದಿರತಕ್ಕದ್ದು ಅಂತಹ ಫಲಾನುಬವಿಗಳಿಗೆ ಡಿ.ಬಿ.ಟಿ ಮೂಲಕ ಇಲಾಖೆಯಿಂದ ಹಣ ವರ್ಗಾವಣೆ ಮಾಡಲಾಗುವುದು.
ಜಿಲ್ಲೆಯಲ್ಲಿ ೬೮,೬೩೬ ಅಂತ್ಯೋದಯ, ೧೦,೮೦,೮೮೦ ಬಿಪಿಎಲ್ ಹಾಗೂ ೩,೨೧,೨೩೭ ಎಪಿಎಲ್ ಪಡಿತರ ಚೀಟಿಗಳು ಸೇರಿ ಒಟ್ಟು ೧೪,೭೦,೭೫೩ ಪಡಿತರ ಚೀಟಿಗಳು ಚಾಲ್ತಿಯಲ್ಲಿರುತ್ತವೆ.
ಜುಲೈ ೧ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ ೭ ರಿಂದ ರಾತ್ರಿ ೯ ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಕಾರಣ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬಹುದು.
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಗೆ ಈ ಮಾಹೆ ಅಂತಿಮ ಗಡುವು ನೀಡಲಾಗಿರುತ್ತದೆ.
ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-೧೯೫೫ ರಡಿ ಕ್ರಮ ಜರುಗಿಸಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ ಕಚೇರಿ ಅಥವಾ ಜಂಟಿ ನಿರ್ದೇಶಕರ ಕಚೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ