RCB, ಪಂಜಾಬ್ ಮಧ್ಯೆ ಇಂದು ಜಿದ್ದಾಜಿದ್ದಿ : ಹೈವೋಲ್ಟೇಜ್ ಪಂದ್ಯದಲ್ಲಿ ಗೆಲ್ಲೋದ್ಯಾರು..?
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಡಲು ಸಜ್ಜಾಗಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಲಿದೆ. ಮೊದಲ ಪಂದ್ಯದಲ್ಲೇ ಆರ್‌ಸಿಬಿ ಚೆನ್ನೈ ವಿರುದ್ಧ ಸೋತಿತ್ತು. 174 ರನ್ ಟಾರ್ಗೆಟ್ ನೀಡಿದ್ರೂ 6 ವಿಕೆಟ್ಗಳ ಸೋಲು ಅನುಭವಿಸಿತ್ತು. ಆರ್‌ಸಿಬಿ ನೀಡಿದ್ರೂ ಬಿಗ್ ಟಾರ್ಗೆಟ್ ಆದ್ರೂ ಬೌಲರ್ಗಳು ಡಿಫೆಂಡ್ ಮಾಡಲು ಆಗಲಿಲ್ಲ. ಈ ಸೋಲಿನಿಂದ ಕಂಗೆಟ್ಟಿರೋ ಆರ್‌ಸಿಬಿ ತವರಿನಲ್ಲಿ ಪಂಜಾಬ್ ತಂಡವನ್ನು ಕಟ್ಟಿಹಾಕಲು ಸಜ್ಜಾಗಿದೆ. ಇನ್ನೊಂದೆಡೆ ಪಂಜಾಬ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆದ್ದು ಬೀಗಿತ್ತು. ಸದ್ಯ ಪಂಜಾಬ್ ಸ್ಟ್ರೆಂಥ್ ಸ್ಯಾಮ್ ಕರನ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ ಆಗಿದ್ದಾರೆ. ಆರ್ಸಿಬಿಯಲ್ಲಿ ವಿರಾಟ್, ಫಾಫ್, ದಿನೇಶ್ ಕಾರ್ತಿಕ್, ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್ ಇದ್ದಾರೆ. ಉಭಯ ತಂಡಗಳ ಪ್ಲೇಯಿಂಗ್ ಎಲೆವೆನ್ ಹೀಗಿವೆ..! ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್. ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.