LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೊಲೀಸ್‌ ಇಲಾಖೆಯಲ್ಲಿ 4656, ಶಿಕ್ಷಣ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು: ಶಿಕ್ಷಣ ಮತ್ತು ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗ ಬಯಸುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿ ನೀಡಲಾಗಿದೆ. ಒಳ ಮೀಸಲಾತಿ ವಿಚಾರ ಇತ್ಯರ್ಥವಾಗಿರುವುದರಿಂದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.

ಶಿಕ್ಷಣ ಇಲಾಖೆಯಲ್ಲಿ ಬೃಹತ್‌ ಪ್ರಮಾಣದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ದೈಹಿಕ ಶಿಕ್ಷಕರು ಒಳಗೊಂಡಂತೆ ಖಾಲಿ ಇರುವ 18000 ಶಿಕ್ಷಕರ ನೇಮಕಾತಿಗೆ ಈ ಹಿಂದೆಯೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಒಳ ಮೀಸಲಾತಿ ವಿಚಾರ ಬಗೆಹರಿಯದ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆ ಪ್ರಸ್ತಾವಕ್ಕೆ ಅನುಮೋದನೆ ನೀಡಿದ ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರಯಲಿದೆ.

ಪೊಲೀಸ್‌ ಇಲಾಖೆಯಲ್ಲಿ 4656 ಹುದ್ದೆಗಳ ನೇಮಕಾತಿಗೆ ಸಿದ್ಧತೆ ಮಾಡಲಾಗಿದ್ದು, ರಾಜ್ಯದಲ್ಲಿ 10ಸಾವಿರದಿಂದ 15 ಸಾವಿರ ಪೊಲೀಸ್‌ ಕಾನ್ಸ್ಟೇಬಲ್‌ ಹುದ್ದೆಗಳಲ್ಲಿ ಕೆಎಸ್‌ಆರ್‌ಪಿ, ಸಿವಿಲ್‌, ಸಶಸ್ತ್ರ, ಮೀಸಲು ಪಡೆ ಸೇರಿ ಎಲ್ಲಾ ಪೊಲೀಸ್‌ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು.

ಸಶಸ್ತ್ರ ಪೊಲೀಸ್‌ ಕಾನ್ಸ್ಟೇಬಲ್‌ 1650, ನಾಗರಿಕ ಪೊಲೀಸ್‌ ಕಾನ್ಸ್ಟೇಬಲ್‌ ಸಿವಿಲ್‌ 614, ಕೆಎಸ್‌ಆರ್‌ಪಿ 2032, ಕೆಎಸ್‌ಐಎಸ್‌ಎಫ್‌ 340, ಡಿಟೆಕ್ಟಿವ್‌ ಇನ್ಸ್‌ಪೆಕ್ಟರ್‌ 20 ಹುದ್ದೆಗಳು ಸೇರಿ 4656 ಪೊಲೀಸ್‌ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026