ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ .! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.!
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಮುಂದಿನ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮೇ 21ರಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಎರಡು ದಿನ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಉಳಿದಂತೆ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಮನಗರ, ಕೋಲಾರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.