Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೌಹಾರ್ದತೆಗೆ ರೆಡ್‌ಕ್ರಾಸ್ ಸಂಸ್ಥೆ ಮಾದರಿ: ಶಶಿಕಲಾ ರವಿಶಂಕರ್

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿಶ್ವಮಟ್ಟದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಎತ್ತಿಹಿಡಿಯುವಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಪಾತ್ರ ಹಾಗೂ ಸೇವೆ ಅತ್ಯಂತ ಮಾದರಿಯಾಗಿದೆ ಎಂದು ಯೂಥ್ ರೆಡ್‌ಕ್ರಾಸ್ ಘಟಕದ ಸಂಯೋಜಕಿ ಶಶಿಕಲಾ ರವಿಶಂಕರ್ ಹೇಳಿದರು.

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕ, ಯೂಥ್ ರೆಡ್‌ಕ್ರಾಸ್ ಘಟಕ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 'ಜಿನೀವಾ ಒಪ್ಪಂದ ದಿನಾಚರಣೆ'ಯ ಅಂಗವಾಗಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಸಾಮಾಜಿಕ ಅರಿವು ಮತ್ತು ಜಾಥಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿಶ್ವದ ಇತಿಹಾಸದಲ್ಲಿ ಮಾನವೀಯ ಬದುಕು ಹಾಗೂ ಸಾಧನೆಗಳು ಸದಾ ಜೀವಂತವಾಗಿರುತ್ತವೆ. ಜಿನೀವಾ ಒಪ್ಪಂದದ ಸಂದರ್ಭದಲ್ಲಿ ಮಿತ್ರ-ಶತ್ರು ಎಂಬ ಭೇದಭಾವವಿಲ್ಲದೆ, ಯುದ್ಧದ ಸಾವು-ನೋವಿನ ನಡುವೆ ಸ್ವಯಂಪ್ರೇರಿತರಾಗಿ ವೈದ್ಯಕೀಯ ನೆರವು ನೀಡಿದ ಜೀನ್ ಹೆನ್ರಿ ಡ್ಯೂನಾಂಟ್ ಅವರ ಮಾನವೀಯ ಸೇವೆ ವಿಶ್ವಕ್ಕೇ ಮಾದರಿಯಾಗಿದೆ. ಅವರ ಸ್ಮರಣಾರ್ಥವಾಗಿಯೇ ಜಗತ್ತಿನಾದ್ಯಂತ ರೆಡ್‌ಕ್ರಾಸ್ ಸಂಸ್ಥೆ ಕಾರ್ಯಾಚರಿಸುತ್ತಿದೆ ಎಂದು ತಿಳಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ತಾಲ್ಲೂಕು ಚೇರ್ಮನ್ ರಾಧಾ ಎಚ್.ಎಸ್. ಸುಂದರ್‌ರಾಜ್ ಸಂಸ್ಥೆಯ ಚಟುವಟಿಕೆಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಬಿ.ಆರ್. ಹೇಮಲತಾ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯ ಮೂಲ ಉದ್ದೇಶ ಮತ್ತು ಗುರಿಗಳು ಸಮಾಜಮುಖಿ ಹಾಗೂ ಪ್ರಗತಿಪರ ಚಿಂತನೆಗಳಿಗೆ ಪ್ರೇರಣೆಯಾಗಿವೆ ಎಂದರು.

ಈ ಸಂದರ್ಭದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್. ರಾಘವೇಂದ್ರ, ರಾಜ್ಯ ಸಮಿತಿ ಸದಸ್ಯ ಅನಂತರಾಮ್, ಪ್ರೊ. ಬಿ.ಕೆ. ನಾಗಣ್ಣ, ಬಸವರಾಜ್ ಟಿ. ಬೆಳಗಟ್ಟಿ, ಬಿ.ಟಿ. ಭರತ್, ಎಸ್.ಎಂ. ವೀರೇಶ್, ಡಾ. ಎ. ದೇವಿಕಾ, ಮಹಮದ್ ಸಾದತ್, ನರಸಿಂಹಮೂರ್ತಿ, ಎಚ್.ಎಸ್. ಚಂದ್ರವದನ, ಎಂ.ವಿ. ನಾಗರತ್ನಮ್ಮ, ಸರೋಜಮ್ಮ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ