LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಿ*





*ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 08:* ಕೃಷಿ ಇಲಾಖೆ ವತಿಯಿಂದ 2025 ನೇ ಸಾಲಿನ ಮುಂಗಾರು ಹಂಗಾಮಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು” ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.



ಬೆಂಗಳೂರು ನಗರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದ್ದು, ರಾಗಿ, ಭತ್ತ ಮತ್ತು ಮುಸುಕಿನ ಜೀಳ ಬೆಳೆಗಳಿಗೆ ಆಗಸ್ಟ್ 16 ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಿದ್ದು, ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ (Common Service Centre), ಕರ್ನಾಟಕ ಒನ್ ಅಥವಾ ಬ್ಯಾಂಕ್ ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ , FRUTTS ಗುರುತಿನ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದು.



ಹೆಚ್ಚಿನ ವಿವರಗಳಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ: ಅಗ್ರಿಕಲ್ಚರ್ ಇನ್ಯೂರನ್ಸ್ ಕಂಪೆನಿ ಆಫ್ ಇಂಡಿಯಾ ಲಿ. (ಟೋಲ್ ಪ್ರೀ ನಂ: 1800-4250 505) ಸಂರ್ಕಿಸಬಹುದು.



ವಿಶೇಷ ಸೂಚನೆ : ರೈತರು ಅಂದಾಜು / ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಹಾಗೂ ಬಿತ್ತನೆ ದೃಢೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗಧಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು ಎಂದು ಬೆಂಗಳೂರು ನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು