Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಸುದ್ದಿಮೂಲ ವಾರ್ತೆ

ಬೆಂಗಳೂರು.ಜು.7:ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷವು ಕರ್ನಾಟಕದ ಜನತೆಗೆ ೫ ಗ್ಯಾರಂಟಿಗಳ ಭರವಸೆ ನೀಡಿದೆ. ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಸರ್ಕಾರ ಈ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿತು. ಈಗಾಗಲೇ ನಾವು ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಮೂಲಕ ಅವರ ಕನಸುಗಳಿಗೆ ರೆಕ್ಕೆ ಮೂಡಿಸುವ

ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಈಗಾಗಲೇ ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು,
ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು. ಗೃಹಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿನಿಂದ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ ತಿಂಗಳಿನಲ್ಲಿ ಜಾರಿಗೆ ತರುತ್ತೇವೆ. ಯುವನಿಧಿ ಯೋಜನೆಯು 2023ರಲ್ಲಿ ಪದವಿ ಪಡೆದ ಯುವಜನರಿಗಾಗಿ ಜಾರಿಗೆ ಬರಲಿದೆ. ಅನ್ನಭಾಗ್ಯದಡಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರದಿಂದ ಒದಗಿಸುತ್ತಿರುವ ಐದು ಕೆ.ಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದಿಂದ ಒದಗಿಸುವ ಹೆಚ್ಚುವರಿ ಐದು ಕೆ.ಜಿ. ಸೇರಿದಂತೆ ಒಟ್ಟಾರೆ ೧೦ ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ವಿತರಿಸಲು ನಾವು ಬದ್ಧರಾಗಿದ್ದೇವೆ.

17. ನಾವು ಗ್ಯಾರಂಟಿ ಯೋಜನೆಗಳನ್ನು ಯಾಕೆ ಘೋಷಿಸಿದ್ದೇವೆ? ಹಾಗೂ ಯಾಕೆ ಜಾರಿಗೊಳಿಸುತ್ತಿದ್ದೇವೆ? ಅವು ಬಿಟ್ಟಿ ಕೊಡುಗೆಗಳಲ್ಲ. ಈ ಸಂದರ್ಭದಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಚಿಂತನೆಯನ್ನು ಸ್ಮರಿಸುತ್ತೇನೆ.

ʻಭದ್ರತೆಯ ಖಾತರಿ ಕೊಡದ ಆರ್ಥಿಕ ಯೋಜನೆಯಿಂದ ಯಾವ ಉಪಯೋಗವೂ ಇಲ್ಲ. ಯೋಜನೆ ಒಪ್ಪಿತವಾಗಬೇಕಾದರೆ, ಅದು ಮಿತವ್ಯಯದ್ದು ಮತ್ತು ಸುಭದ್ರವು ಆಗಿರಬೇಕು. ಅದು ಮಿತವ್ಯಯದ್ದು ಆಗಿರದಿದ್ದರೆ, ಬಹುಶ: ನಡೆದೀತು. ಆದರೆ, ಸುಭದ್ರವಾಗಿಲ್ಲದಿದ್ದರೆ, ಖಂಡಿತ ನಡೆಯುವುದಿಲ್ಲʼ.
ಮುಕ್ತ ಮಾರುಕಟ್ಟೆಯ ಈ ಯುಗದಲ್ಲಿ ಬಂಡವಾಳ ಹೂಡಿಕೆಯನ್ನು ವ್ಯಾಪಕವಾಗಿ ಆಕರ್ಷಿಸುವುದು, ಉದ್ಯೋಗಸಹಿತ ಬೆಳವಣಿಗೆಯನ್ನು ಸಾಕಾರಗೊಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದ್ದು ಸಂಪತ್ತಿನ ವ್ಯಾಪಕ ಅಸಮಾನ ಹಂಚಿಕೆಯು ಸೃಷ್ಟಿಸುವ ಬೃಹತ್ ಕಂದರವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳುವುದಾಗಿದೆ.

ಅಭಿವೃದ್ಧಿಯ ಫಲವನ್ನು ಬಡವರು, ಶೋಷಿತರು ಹಾಗೂ ದುರ್ಬಲ ವರ್ಗದವರಿಗೆ ಹಂಚುವ ನಮ್ಮ ಪ್ರಯತ್ನವಾಗಿದೆ. ಅಭಿವೃದ್ಧಿಯ ಸಾಹಿತ್ಯದಲ್ಲಿ ಆರ್ಥಿಕ ಪ್ರಗತಿಯ ಫಲಗಳು ಬಡವರಿಗೆ ಸಹಜವಾಗಿ ಹರಿದುಬರುತ್ತದೆ (trickle down theory) ಎಂಬ ನಂಬಿಕೆ ಹುಸಿಯಾದ ಸಂದರ್ಭದಲ್ಲಿ ಬಡವರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಬೇಷರತ್ತಾಗಿ ನಗದು ವರ್ಗಾವಣೆ ಮಾಡುವುದು ಮಹಿಳಾ ಸಬಲೀಕರಣ ಹಾಗೂ ಅವರ ಖರೀದಿಸುವ ಸಾಮರ್ಥ್ಯ ಹೆಚ್ಚಿಸುವ ಪರಿಣಾಮಕಾರಿ ಮಾರ್ಗವೆಂಬುದು ಸಾಬೀತಾಗಿದೆ.

18. ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳು ಕೇಂದ್ರ ಸರ್ಕಾರದ ವೈಫಲ್ಯದಿಂದ ಅನಿಯಂತ್ರಿತ ಬೆಲೆ ಏರಿಕೆಯಿಂದ ತತ್ತರಿಸುವ ಕುಟುಂಬಗಳಿಗೆ ತುಸು ನಿರಾಳತೆ ತಂದುಕೊಡುತ್ತವೆ. ಮಹಿಳೆಯರ ಓಡಾಟಕ್ಕೆ ಬೆಂಬಲ ನೀಡುವ ಶಕ್ತಿ ಯೋಜನೆಯು ಅವರಿಗೆ ಹಣ ಉಳಿತಾಯ ಮಾಡುವುದರೊಂದಿಗೆ ಮನೆಯಿಂದ ದೂರದ ಸ್ಥಳಗಳಲ್ಲಿಯೂ ಉದ್ಯೋಗ ಕಂಡುಕೊಳ್ಳಲು ನೆರವಾಗುತ್ತದೆ. ಅನ್ನಭಾಗ್ಯವು ಯಾರೂ ಹಸಿದುಕೊಂಡಿರಬಾರದೆಂಬುದನ್ನು ಖಾತರಿ ಪಡಿಸಿದರೆ, ಯುವನಿಧಿ, ಉದ್ಯೋಗಾಕಾಂಕ್ಷಿ ಯುವ ಜನರಿಗೆ ಮಾನಸಿಕ ಸ್ಥೈರ್ಯ ನೀಡುತ್ತದೆ.

19. ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವುದರಿಂದ ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

20. ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು.

ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ. 21. ʻನಡೆಯ ಚೆನ್ನ ನುಡಿದು ತೋರಿ, ನುಡಿಯ ಚೆನ್ನ ನಡೆದು ತೋರಿʼ ಎಂಬ ಬಸವಣ್ಣನವರ ವಚನದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದೇವೆ.
22. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ.

ಕೋವಿಡ್‌ 19 ರಿಂದಾಗಿ ಹಾಗೂ ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಸಂವೇದನಾರಹಿತ ಕಾರ್ಯನಿರ್ವಹಣೆಯ ಪರಿಣಾಮ, ಒಪ್ಪತ್ತಿನ ಊಟಕ್ಕೂ ಸಂಚಕಾರ ಒದಗಿದ್ದು ಸುಳ್ಳಲ್ಲ. ದುಡಿಯುವ ಕೈಗಳಿಗೆ ಕೆಲಸ ತಪ್ಪಿದ್ದೂ ನೋಡಿದ್ದೇವೆ.

ಉದ್ಯಮಗಳು ಮುಚ್ಚಿದ್ದರಿಂದ ಸಾವಿರಾರು ಕಾರ್ಮಿಕರು ನೌಕರಿ ಕಳೆದುಕೊಂಡು ಬೀದಿ ಪಾಲಾಗಬೇಕಾಯಿತು. ತಮ್ಮ ಅರ್ಹತೆಗಿಂತ ಕಡಿಮೆ ಮಟ್ಟದ ನೌಕರಿ ನೆಚ್ಚಿಕೊಂಡವರು ಅದೆಷ್ಟೋ? ಒಂದೆಡೆ ಸಾಂಕ್ರಾಮಿಕದ ಭೀತಿ; ಮತ್ತೊಂದೆಡೆ ಹೊಟ್ಟೆಪಾಡಿನ ಚಿಂತೆ. ಸಂಕಷ್ಟಗಳ ಸರಮಾಲೆಗೆ ಬೆಲೆ ಏರಿಕೆಯ ಸೇರ್ಪಡೆಯಿಂದ, ಬಡಜನರ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಸಾಮಾನ್ಯ ವರ್ಗದ ಜನರ ಬದುಕು ಮೂರಾಬಟ್ಟೆಯಾಗಿ ಸಂಕಟ ಅನುಭವಿಸಿದ್ದು ನಾವೆಲ್ಲರೂ ಕಂಡಿದ್ದೇವೆ.

23. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ.

ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು.

ವಿತ್ತೀಯ ಸಂಪನ್ಮೂಲಗಳು ಹಾಗೂ ಆಡಳಿತದ ದಕ್ಷ ನಿರ್ವಹಣೆ ಒಂದು ಕಲೆ ಮತ್ತು ವಿಜ್ಞಾನ; ಕೇವಲ ಸಾಮಾಜಿಕ ಜಾಲತಾಣಗಳ ಸಂದೇಶವಲ್ಲ ಎಂಬುದನ್ನು ಅರಿತರೆ ಒಳ್ಳೆಯದು. ಈ ಯೋಜನೆಗಳು ಅರ್ಹರಿಗೆ ನೇರವಾಗಿ ತಲುಪುವುದರಿಂದ ಹಾಗೂ ಬವಣೆಗಳ ಭಾರದಿಂದ ಏದುಸಿರು ಬಿಡುತ್ತಿರುವ ಬಡವರ ಬದುಕಿನಲ್ಲಿ ಪ್ರಾಣವಾಯುವಿನಂತೆ ಕೆಲಸ ಮಾಡುವುದೆಂಬ ಆಶಯದೊಂದಿಗೆ ಇವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ