Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

"ಗಾಂಧಿ ಭಾರತ ಮರು ನಿರ್ಮಾಣ" ಪುಸ್ತಕಗಳ ಬಿಡುಗಡೆ

ಬೆಳಗಾವಿ, ಜ.21: 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ "ಗಾಂಧಿ ಭಾರತ ಮರು ನಿರ್ಮಾಣ" ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.



ಸುವರ್ಣ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.



1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು,ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ,ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ,ಅಕಾಲಿಗಳಿಗೆ ಅಭಿನಂದನೆ,ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು,ಅಸ್ಪೃಶ್ಯತೆ ನಿವಾರಣೆ,ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ



ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,  ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ, ಸಂಸದರಾದ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ, ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ.ಪಾಟೀಲ, ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ ಮತ್ತಿತರರು ವೇದಿಕೆಯಲ್ಲಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ