ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-14 ಆರೋಪಿ ಪ್ರದೋಷ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯ ತೀರ್ಪನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯವು ಇಂದು ಪ್ರಕಟಿಸಲಿದೆ. ತನ್ನ ತಂದೆಯ ವಾರ್ಷಿಕ ಪುಣ್ಯಸ್ಮರಣೆ ಕಾರ್ಯದಲ್ಲಿ ಪಾಲ್ಗೊಳ್ಳಲು 3 ವಾರಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಪ್ರದೋಷ್ ಮನವಿ ಮಾಡಿಕೊಂಡಿದ್ದರು. ಈ ಅರ್ಜಿಯ ಕುರಿತು ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಮ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದು, ಇಂದಿನ ಕಲಾಪದಲ್ಲಿ ತೀರ್ಪು ಹೊರಬೀಳಲಿದೆ.
ಮತ್ತೊಂದೆಡೆ, ಈ ತನಿಖಾ ಹಂತದ ಕೊಲೆ ಪ್ರಕರಣದಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿ ಪ್ರತ್ಯಕ್ಷ ಸಾಕ್ಷಿಯ ವಿಚಾರಣೆ ಕೂಡ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪುನೀತ್ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆತನ ಹೇಳಿಕೆ ಹಾಗೂ ಸಾಕ್ಷಿ ವಿಚಾರಣೆಯು ಕೇಸ್ನ ಮುಂದಿನ ಹಂತಕ್ಕೆ ಅತ್ಯಂತ ನಿರ್ಣಾಯಕವೆನಿಸಿದೆ.