LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಜಾಹೀರಾತು ಮುಕ್ತ ಅಭಿಯಾನ’ಕ್ಕೆ ಕೈ ಜೋಡಿಸಲು ಮನವಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು "ಜಾಹೀರಾತು ಮುಕ್ತ ಅಭಿಯಾನ" ವನ್ನು ಆರಂಭಿಸಿದೆ ಎಂದು ಬಿಬಿಎಂಪಿಯ ಜಾಹೀರಾತು ಹಾಗೂ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೇಶ್ ಮೋದ್ಗಿಲ್ ಹೇಳಿದರು.

ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018" ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು / ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇದಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ.

ಘನ ಸರ್ಕಾರವು ಪರಿಸರ(ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012 ಬೆಂಗಳೂರು ದಿನಾಂಕ: 11-03-2016 ರಂತೆ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸಲಾಗಿದೆ.

ಆದ್ದರಿಂದ ನಗರದ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ, ಅನಧಿಕೃತ ವಾಣಿಜ್ಯ ಜಾಹೀರಾತುಗಳು, ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು, ಇನ್ನಿತರೆ ಮುದ್ರಣ ಪ್ರಕಟಣೆ/ಜಾಹೀರಾತು ಹಾಗೂ ಖಾಸಗಿ ಸ್ವತ್ತುಗಳಲ್ಲಿ ಅಳವಡಿಸಿರುವ ವಾಣಿಜ್ಯ ಜಾಹೀರಾತುಗಳು, ಬೃಹತ್ ಎಲ್.ಇ.ಡಿ ಜಾಹೀರಾತುಗಳು, ಸೈಕಲ್ ಜಾಹೀರಾತುಗಳು, ವಾಣಿಜ್ಯ ಜಾಹೀರಾತುಗಳು, ವಾಹನ ಜಾಹೀರಾತುಗಳು ಇತರೇ ಜಾಹೀರಾತುಗಳು ಕಂಡು ಬಂದಲ್ಲಿ ಕೇಂದ್ರ ಕಛೇರಿ ಹಾಗೂ ಆಯಾ ವಲಯಗಳ ಕಛೇರಿಗಳಿಗೆ ಮಾಹಿತಿ ನೀಡಲು ನಾಗರೀಕರಲ್ಲಿ ಮನವಿ ಮಾಡಿದೆ.

ಮಾಹಿತಿ ನೀಡಿದಂತಹ ಸ್ಥಳದಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸುವುದು. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಅಪರಾಧ ಎಸಗಿರುವವರಿಗೆ ಕರ್ನಾಟಕ ಮುಕ್ತ ಸ್ಥಳಗಳ(ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಸದರಿಯವರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ *ಬಿಬಿಎಂಪಿಯ ಅನಧಿಕೃತ ವಿವಿಧ ಜಾಹೀರಾತುಗಳನ್ನು ನಿಯಂತ್ರಿಸುವ ಮುಕ್ತ ಅಭಿಯಾನಕ್ಕೆ* ನಾಗರೀಕರಲು ಕೈ ಜೋಡಿಸಿ ಬೆಂಬಲಿಸಲು *ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್* ರವರು ಕೋರಿರುತ್ತಾರೆ‌.

ಅನಧಿಕೃತ ಜಾಹೀರಾತುಗಳ ಕುರಿತು ದೂರುಗಳನ್ನು ನೊಂದಾಯಿಸುವ ದೂರವಾಣಿ ಸಂಖ್ಯೆಯ ವಿವರ:


*ಉಪ ಆಯುಕ್ತರು(ಜಾಹೀರಾತು):* 9480683939

*ಕೇಂದ್ರ ಕಛೇರಿ:* 080-22221188

*ನಿಯಂತ್ರಣ ಕೊಠಡಿ ಐಪಿಪಿ:* 080-22660000

*ಪೂರ್ವ ವಲಯ ನಿಯಂತ್ರಣ ಕೊಠಡಿ:*

080-22975803 / 22975502

*ಪಶ್ಚಿಮ ವಲಯ ನಿಯಂತ್ರಣ ಕೊಠಡಿ:*

080-23561692 / 23463366

*ದಕ್ಷಿಣ ವಲಯ ನಿಯಂತ್ರಣ ಕೊಠಡಿ:*

080-26566362 / 22975703

*ರಾಜರಾಜೇಶ್ವರಿ ನಗರ ವಲಯ ನಿಯಂತ್ರಣ ಕೊಠಡಿ:*

080-28601851 / 28600957

*ಬೊಮ್ಮನಹಳ್ಳಿ ವಲಯ ನಿಯಂತ್ರಣ ಕೊಠಡಿ:*

080-25732447 / 25735642

*ಮಹದೇವಪುರ ವಲಯ ನಿಯಂತ್ರಣ ಕೊಠಡಿ:*

080-28512300 / 28512301

*ಯಲಹಂಕ ವಲಯ ನಿಯಂತ್ರಣ ಕೊಠಡಿ:*

080-23636671 / 22975936

*ದಾಸರಹಳ್ಳಿ ವಲಯ ನಿಯಂತ್ರಣ ಕೊಠಡಿ:*

080-28394909 / 28393688
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್