ಬಳ್ಳಾರಿ,ಅ.15: ಸಂಡೂರು ತಾಲೂಕಿನ ವಡ್ಡು ಗ್ರಾಮದ ಯಲ್ಲಮ್ಮ ಗುಡಿ ಹತ್ತಿರದ ನಿವಾಸಿಯಾದ ಸಾನಿಯಾ (ಪಲ್ಲವಿ) ಎನ್ನುವ 19 ವರ್ಷದ ಮಹಿಳೆಯು ಶ್ರೇಯಸ್ ಎನ್ನುವ 01 ವರ್ಷದ ತನ್ನ ಮಗುವಿನೊಂದಿಗೆ ಅ.09 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
*ಸಾನಿಯಾ ಚಹರೆ ಗುರುತು:*
ಸುಮಾರು 4.8 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಕೋಲು ಮುಖ, ಗೋಧಿ ಮೈ ಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟಾಪ್ ಮತ್ತು ಕೆಂಪು ಬಣ್ಣದ ಪ್ಯಾಂಟ್ ಧರಿಸಿರುತ್ತಾಳೆ. ಮಹಿಳೆಯು ಕನ್ನಡ, ಉರ್ದು ಹಾಗೂ ಹಿಂದಿ ಭಾಷೆ ಮಾತನಾಡುತ್ತಾಳೆ.
ಮೇಲ್ಕಂಡ ಚಹರೆಯುಳ್ಳ ತಾಯಿ ಮತ್ತು ಮಗುವಿನ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100, ಮೊ.9480803062, ಸಂಡೂರು ಸಿಪಿಐ ಮೊ.9480803036, ತೋರಣಗಲ್ಲು ಡಿಎಸ್ಪಿ ಮೊ.9480803010, ಬಳ್ಳಾರಿ ಎಸ್ಪಿ ದೂ.08392-258300, ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-279100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.