Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ ಅಧಿವೇಶನದಲ್ಲೇ ಸದಾಶಿವ ವರದಿ ಮಂಡಿಸಲು ಮನವಿ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.



ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಮತ್ತು ಶಾಸಕರ ಸಭೆಯ ಬಳಿಕ ಅವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ಕುರಿತು ಚಿತ್ರದುರ್ಗ ನಗರದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶ ನಡೆಸಲಾಗಿತ್ತು. ಆಗ ಹತ್ತು ಹಲವು ಘೋಷಣೆಗಳನ್ನು ಮಾಡಿದ್ದೆವು. ಅದರಲ್ಲಿ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿಯೇ ಸದನದ ಮುಂದಿಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ ಎಂದರು.



ಸಚಿವರಾದ ಪ್ರಿಯಾಂಕ ಖರ್ಗೆ. ಡಾ. ಎಚ್‌ಸಿ ಮಹದೇವಪ್ಪ, ಕೆಎಚ್ ಮುನಿಯಪ್ಪ ಮತ್ತು ನಮ್ಮಲ್ಲಿ ಕೆಲವರು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಸಮಾಜದ ಮುಖಂಡರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.



ನ್ಯಾ. ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸೋಮವಾರ ಕರೆ ನೀಡಿದ್ದರು.  ಸದಾಶಿವ ಆಯೋಗದ ಶಿಫಾರಸು ಜಾರಿಗಾಗಿ ತೀವ್ರ ಆಂದೋಲನದ ಅಗತ್ಯವಿದೆ. ನಿಮ್ಮ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಿ. ಅವರಿಗೆ ಕಾರ್ಯಕ್ರಮಗಳನ್ನು ನಡೆಸಲು ಬಿಡಬೇಡಿ. ಸಚಿವನಾಗಿದ್ದುಕೊಂಡೇ ನಾನು ನಿಮಗೆ ಈ ರೀತಿ ಹೇಳುತ್ತಿದ್ದೇನೆ ಎಂದು ಕರ್ನಾಟಕ ಆದಿಜಾಂಬವ ಸಾಂಸ್ಕೃತಿಕ ಸಮಿತಿಯ ಮುಖಂಡರ ಸಭೆಯಲ್ಲಿ ಮುನಿಯಪ್ಪ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು.



 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ