Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Koppal

ಅರಣ್ಯ, ವನ್ಯಜೀವಿಗಳ ಉಳಿವಿಗಾಗಿ ಯುವಪೀಳಿಗೆ ಸಂಕಲ್ಪ ಮಾಡಿ: ಡಿಎಫ್ಓ ನಿರ್ಮಲ

ಕೊಪ್ಪಳದಲ್ಲಿ ಅರಣ್ಯ ಇಲಾಖೆಯಿಂದ ವನ್ಯಜೀವಿ ಸಪ್ತಾಹ ಆಚರಣೆ

ಕೊಪ್ಪಳ ಅಕ್ಟೋಬರ್ 10: ಅರಣ್ಯ ಮತ್ತು ವನ್ಯಜೀವಿಗಳು ಮಾನವನ ಅಸ್ತಿತ್ವಕ್ಕೆ ಅತ್ಯಗತ್ಯವಾಗುದ್ದು, ಅವುಗಳ ಉಳಿವಿಗಾಗಿ ಯುವಪೀಳಿಗೆ ಸಂಕಲ್ಪ ಮಾಡಬೇಕು ಎಂದು ಕೊಪ್ಪಳ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲ ಎನ್.ಕೆ. ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. 
ಕೊಪ್ಪಳ ಅರಣ್ಯ ವಿಭಾಗದ ವತಿಯಿಂದ ವನ್ಯಜೀವಿ ಸಪ್ತಾಹದ ಅಂಗವಾಗಿ ನಗರದ ಓಜನಹಳ್ಳಿ ರಸ್ತೆಯ ಜ್ಞಾನ ಬಂಧು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ (ಅ. 08) ಆಯೋಜಿಸಲಾಗಿದ್ದ ವನ್ಯಜೀವಿ ಸಂರಕ್ಷಣೆ ಕುರಿತ ವಿಚಾರಸಂಕಿರಣ ಹಾಗೂ ಜಾಗೃತಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಡು ಮತ್ತು ಪ್ರಾಣಿಗಳ ನಾಶದಿಂದ ಇಡೀ ಪರಿಸರ ವ್ಯವಸ್ಥೆ ಏರುಪೇರಾಗಲಿದ್ದು, ಇದರಿಂದ ಮನುಕುಲವೇ ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ. ಹೀಗಾಗಿ, ವನ್ಯಜೀವಿ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಕರ್ತವ್ಯವಷ್ಟೇ ಅಲ್ಲ; ಸಮಾಜದ ಪ್ರತಿಯೊಬ್ಬ ನಾಗರಿಕರ ನೈತಿಕ ಹೊಣೆಗಾರಿಕೆಯಾಗಿದೆ. ವಿಶೇಷವಾಗಿ ಶಾಲೆ-ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳು ಪರಿಸರ ಜಾಗೃತಿ ಬೆಳೆಸಿಕೊಂಡು, ತಮ್ಮ ಸುತ್ತಮುತ್ತಲಿನ ಜೀವವೈವಿಧ್ಯತೆ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಲು ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು. ಕಾಡು ಹಾಗೂ ಪ್ರಾಣಿಗಳ ಉಳಿವಿಗೆ ಎಲ್ಲರೂ ಕೈಜೋಡಿಸುವಂತೆ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ವನ್ಯಜೀವಿ ತಜ್ಞರಾದ ಸಮದ್ ಕೊಟ್ಟೂರು ಅವರು ಉಪನ್ಯಾಸ ನೀಡಿ, ಪರಿಸರ ಸಮತೋಲನ ಕಾಪಾಡುವಲ್ಲಿ ವನ್ಯಜೀವಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಕೊಪ್ಪಳ ಜಿಲ್ಲೆಯು ವೈವಿಧ್ಯಮಯ ವನ್ಯಜೀವಿ ಸಂಪತ್ತನ್ನು ಹೊಂದಿದ್ದು, ಅವುಗಳ ಪರಿಚಯ ಮತ್ತು ಸಂರಕ್ಷಣೆಗೆ ಸಾರ್ವಜನಿಕರು ಹಾಗೂ ಯುವಜನತೆ ಮುಂದಾಗಬೇಕು ಎಂದು ತಿಳಿಸಿದರು.
*ಬಹುಮಾನ ಮತ್ತು ಪ್ರಮಾಣಪತ್ರ ವಿತರಣೆ:* ವನ್ಯಜೀವಿ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುಸೇನ ಬಸಿಯಾ ಪೆಂಡಾರಿ, ಕೊಪ್ಪಳ ಉಪ-ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಹೆಚ್. ಮುಲ್ಲಾ, ಸಾಮಾಜಿಕ ಅರಣ್ಯ ಉಪ-ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಾಯತ್ರಿ ಲೋಕಣ್ಣವರ್, ಕಾಲೇಜಿನ ಪ್ರಾಚಾರ್ಯರಾದ ಜ್ಯೋತಿ, ರವೀಂದ್ರ ಜೆ. ಸೇರಿದಂತೆ ಜಿಲ್ಲೆಯ ಎಲ್ಲಾ ವಲಯ ಅರಣ್ಯ ಅಧಿಕಾರಿಗಳು, ಉಪ ವಲಯ ಅರಣ್ಯಾಧಿಕಾರಿಗಳು, ಗಸ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು, ಶಾಲಾ-ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುನಿರಾಬಾದ್ ವಲಯ ಅರಣ್ಯಾಧಿಕಾರಿ ಬಳ್ಳಾರಿ ರಾಘವೇಂದ್ರ ಅವರು ಸ್ವಾಗತಿಸಿ, ವಂದಿಸಿದರು.
*ಶ್ರೀ ಗವಿಮಠದಿಂದ ಬೃಹತ್ ಜಾಗೃತಿ ಜಾಥಾ:* ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ ಐತಿಹಾಸಿಕ ಶ್ರೀ ಗವಿಮಠದ ಆವರಣದಿಂದ ಕೊಪ್ಪಳ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ನಡೆಯಿತು. ವಿವಿಧ ಕಲಾತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಸಾಗಿದ ಈ ಜಾಥಾದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜ್ಞಾನ ಬಂಧು ಪಬ್ಲಿಕ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪರಿಸರ ಹಾಗೂ ವನ್ಯಜೀವಿಗಳ ಉಳಿವಿಗಾಗಿ ಘೋಷಣೆಗಳನ್ನು ಕೂಗುತ್ತಾ ನಗರದ ಕಾರ್ಮಿಕ ವೃತ್ತದವರೆಗೆ ಸಾಗಿದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ