LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ



ಕೊಪ್ಪಳ ಫೆಬ್ರವರಿ 04ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರವರಿ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಅಧ್ಯಕ್ಷರು ಫೆ.5 ರಂದು ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸುವರು. ಬೆಳಿಗ್ಗೆ 11 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಮಧ್ಯಾಹ್ನ 12.45 ಗಂಟೆಗೆ ಕಾರಟಗಿ ತಾಲ್ಲೂಕಿನ ಈಳಿಗನೂರು ಗ್ರಾಮಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಈಳಿಗನೂರಿನಿಂದ ಹೊರಟು ಮಧ್ಯಾಹ್ನ 3.30 ಗಂಟೆಗೆ ಕಾರಟಗಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು. ಸಂಜೆ 4.30 ಗಂಟೆಗೆ ಕಾರಟಗಿ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5.30 ಗಂಟೆಗೆ ಕಾರಟಗಿಯಿಂದ ಹೊರಟು ಸಂಜೆ 6 ಗಂಟೆಗೆ ಗಂಗಾವತಿಯ ಹಿಂದುಳಿದ ವರ್ಗಗಳ ಡಿ.ದೇವರಾಜ ಅರಸು ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಸಂಜೆ 7 ಗಂಟೆಗೆ ಗಂಗಾವತಿಯಿಂದ ಹೊರಟು 8 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಅಂದು ರಾತ್ರಿ ಕೊಪ್ಪಳದಲ್ಲಿಯೇ ವಾಸ್ತವ್ಯ ಮಾಡುವರು.

ಫೆ.6 ರಂದು ಬೆಳಿಗ್ಗೆ 10 ಗಂಟೆಗೆ ಅಧ್ಯಕ್ಷರು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ POSH ಅಧಿನಿಯಮ 2013ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಧ್ಯಾಹ್ನ 12 ಗಂಟೆಗೆ ಕೊಪ್ಪಳದ ವಾರ್ಡ್ ನಂ.28, ಸಿದ್ದೇಶ್ವರ ನಗರದ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ, ಅಲೆಮಾರಿ ಸಮುದಾಯದ ಮಹಿಳೆಯರ ಸಮಸ್ಯೆಗಳನ್ನು ಆಲಿಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸ್ನೇಹ ಸಂಸ್ಥೆ ಕೊಪ್ಪಳ ಇವರು ಆಯೋಜಿಸಿರುವ ದೇವದಾಸಿ ಮಹಿಳೆಯರೊಂದಿಗೆ ಸಂವಾದ ನಡೆಸುವರು. ಸಂಜೆ 5 ಗಂಟೆಗೆ ಕೊಪ್ಪಳದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 6 ಗಂಟೆಗೆ ಕೊಪ್ಪಳದ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿನಿಲಯಕ್ಕೆ ಭೇಟಿ ನೀಡುವರು. ಅಂದು ರಾತ್ರಿ ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು.

ಫೆ.7 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಮಹಿಳಾ ಸ್ಪಂದನಾ ಕಾರ್ಯಕ್ರಮ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ವಿವಿಧ ಮಾಧ್ಯಮದವರೊಂದಿಗೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 6.30 ಗಂಟೆಗೆ ಕೊಪ್ಪಳದಿಂದ ರೈಲಿನ ಮೂಲಕ ನಿರ್ಗಮಿಸಿ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು