LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಕಾರಣಕ್ಕೆ ಆರ್‌ಎಫ್‌ಒ ವಸಂತಕುಮಾರ್ ಅಮಾನತು.!

 

ಚಿತ್ರದುರ್ಗ: ಚಿತ್ರದುರ್ಗದ ವಿಭಾಗದ ವಲಯ ಅರಣ್ಯಾಧಿಕಾರಿ ವಸಂತಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಅಧಿಕಾರ ವ್ಯಾಪ್ತಿ ಮೀರಿ ಕಬ್ಬಿಣದ ಅದಿರು ತುಂಬಿದ ಲಾರಿಗಳನ್ನು -ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿದ ಆರೋಪದ ಮೇಲೆ ಅಮಾನತ್ತು ಮಾಡಲಾಗಿದೆ.

ಹೊಳಲ್ಕೆರೆ ತಾಲ್ಲೂಕು ದಿಂಡದಹಳ್ಳಿ ಸರ್ವೆ ನಂಬರ್ 38ರಲ್ಲಿ ದಾಸ್ತಾನಾಗಿದ್ದ ಕಬ್ಬಿಣದ ಅದಿರಿನ ಮೇಲಿನ ಮರ ಕಡಿಯುವಂತಿಲ್ಲ ಎಂಬ ಷರತ್ತು ವಿಧಿಸಿ ಸಾಯಿ ಬಾಲಾಜಿ ಸ್ಪಾಂಜ್ ಐರನ್ ಇಂಡಿಯಾ ಕಂಪನಿಗೆ, ಅನುಮತಿ ನೀಡಲಾಗಿತ್ತು, ಆದರೆ ಗಣಿ ಕಂಪನಿಯವರು ಮರ ಕಡಿದು ಕಬ್ಬಿಣ ಅದಿರು ಸಾಗಿಸಿದ್ದರು. ಅದಿರು ತುಂಬಿದ್ದ 5 ಲಾರಿಗಳನ್ನು ವಸಂತಕುಮಾರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.

ಕಬ್ಬಿಣದ ಅದಿರು ದಾಸ್ತಾನು ಪ್ರದೇಶ ಹೊಳಲ್ಕೆರೆ ತಾಲ್ಲೂಕು ಕಾರ್ಯ ವ್ಯಾಪ್ತಿಗೆ ಬರುವ ಕ್ಷೇತ್ರವಾಗಿದೆ. ಆದರೆ ಚಿತ್ರದುರ್ಗ ವ್ಯಾಪ್ತಿಯ ಆರ್‌ಎಫ್‌ಒ ವಸಂತಕುಮಾ‌ರ್ ಪ್ರಕರಣ ದಾಖಲು ಮಾಡಿರುವುದು ಕರ್ತವ್ಯ ಲೋಪವಾಗಿದೆ ಎಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ವರದಿ ನೀಡಿದ್ದರು.

ಈ ವರದಿ ಆಧರಿಸಿ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಗೀತಾ ಎಂ ಪಾಟೀಲ ಅವರು ವಸಂತ್ ಕುಮಾ‌ರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.08 ರಂದು ಕನಕ ಜಯಂತಿ, ಕನಕಶ್ರೀ ಸೇವಾರತ್ನ ಪ್ರಶಸ್ತಿ, ಸಮಾಜದ ಸಾಧಕರಿಗೆ ಸನ್ಮಾನ ಬಿ.ಟಿ.ಜಗದೀಶ್.!ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು ಸಾಧ್ಯವಿಲ್ಲ : ಅಣ್ಣಾಮಲೈಮಚ್ಚಿನಿಂದ ಕೊಚ್ಚಿ ಒಂದೇ ಕುಟುಂಬದ ಮೂವರನ್ನು ಕೊಂದು ವ್ಯಕ್ತಿ ಆತ್ಮಹತ್ಯೆವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಐಎಎಸ್ ಕೋಮಲ್ ಪುನಿಯಾ ಯಶಸ್ಸಿನ ಕಥನಅಂದುಕೊಂಡಂತೆ ಕೆಲಸ ಕಾರ್ಯಗಳು ಕ್ಷಣಾರ್ಧದಲ್ಲಿಯೇ ನೆರವೇರಬೇಕೆಂದರೆ ಈ ಒಂದೇ ಒಂದು ಬಲಿಷ್ಠ ತಾಂತ್ರಿಕ ಬೇರನ್ನು ನಿಮ್ಮ ಹತ್ತಿರ ಇಟ್ಟುಕೊಂಡು ನೋಡಿ ಸಾಕು!ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು.!ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ.!ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 02-11-2025 .!