LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಆರ್ಜಿ ಆಹ್ವಾನ.!

ಶಿವಮೊಗ್ಗ : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಪ್ರಾಣಿ ಆಹಾರ ಶಾಸ್ತ್ರ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ, ಜಾನುವಾರು ಸಾಕಾಣಕಾ ಸಂಕೀರ್ಣ (ಕುಕ್ಕುಟ/ಜಾನುವಾರು ಉತ್ಪಾದನಾ ನಿರ್ವಹಣ ಶಾಸ್ತ್ರ), ಪಶುವೈದ್ಯಕೀಯ ಶರೀರ ಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ-ಚಿಕಿತ್ಸಾ ವಿಭಾಗ ಮತ್ತು ಶಸ್ತ್ರ ಚಿಕಿತ್ಸೆ ವಿಭಾಗಗಳಲ್ಲಿ ಸಹಾಯಕ ಪ್ರಾದ್ಯಾಪಕರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವಂತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-200872 ಹಾಗೂ ವೆಬ್ಸೈಟ್ www.kvafsu.edu.in ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026