LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ರಿತಿಕಾ ರಾತ್

ಭುವನೇಶ್ವರ: ಯುಪಿಎಸ್‌ಸಿ ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯನ್ನು ಕೆಲ ಅಭ್ಯರ್ಥಿಗಳು ಮೊದಲ ಪ್ರಯತ್ನದಲ್ಲಿ, ಇನ್ನೂ ಕೆಲವರು ಎರಡು ಅಥವಾ ಮೂರನೇ ಪ್ರಯತ್ನದಲ್ಲಿ ಅಥವಾ ಕೆಲ ಪ್ರಯತ್ನಗಳ ಬಳಿಕ ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಹೀಗೆ ತಮ್ಮ ಮೂರನೇ ಪ್ರಯತ್ನದಲ್ಲಿ ಉತ್ತೂರ್ಣರಾದ ರಿತಿಕಾ ರಾತ್ ಅವರ ಯಶಸ್ಸಿನ ಕಥೆ ಇದು.

ಭುವನೇಶ್ವರದವರಾದ ರಿತಿಕಾ, ಅವರ ತಂದೆ ಶಿಶಿರ್ ರಾಥೋಡ್ ಅವರು ನಿವೃತ್ತ ಭಾರತೀಯ ಅರಣ್ಯ ಸೇವಾ ಅಧಿಕಾರಿಯಾಗಿದ್ದು, ಆಡಳಿತ ಮತ್ತು ಸಾರ್ವಜನಿಕ ಸೇವೆಯ ಬಗ್ಗೆ ರಿತಿಕಾ ಅವರಿಗೆ ಆಸಕ್ತಿ ಮೂಡಲು ಅವರೇ ಪ್ರೇರಣೆಯಾಗಿದ್ದರು.

ರಿತಿಕಾ ಅವರು ಐಐಎಂ ಇಂದೋರ್‌ನ ಹಳೆಯ ವಿದ್ಯಾರ್ಥಿನಿ. ಐಐಎಂ ನಲ್ಲಿ ಮ್ಯಾನೇಜ್‌ಮೆಂಟ್ ಪದವಿ ಮುಗಿಸಿದ ನಂತರ, ಅವರು ಸ್ವಲ್ಪ ಕಾಲ ವೃತ್ತಿಜೀವನದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ತಮ್ಮ ಬಹುಕಾಲದ ಕನಸನ್ನು ನನಸಾಗಿಸಿಕೊಳ್ಳಲು ಅವರು ಕೆಲಸವನ್ನು ಬಿಟ್ಟು ಯುಪಿಎಸ್‌ಸಿ ಸಿದ್ಧತೆಯಲ್ಲಿ ತೊಡಗಿಕೊಂಡರು.

ರಿತಿಕಾ ಅವರು ಯುಪಿಎಸ್‌ಸಿ ಪರೀಕ್ಷೆಗೆ ತಮ್ಮ ಐಚ್ಛಿಕ ವಿಷಯವಾಗಿ ತತ್ವಶಾಸ್ತ್ರವನ್ನು ಆರಿಸಿಕೊಂಡಿದ್ದರು. ಅದು ಅವರ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿತು. ಪರೀಕ್ಷಾ ಸಿದ್ಧತೆಯ ವೇಳೆ ಅವರು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಶಿಸ್ತಿನ ದಿನಚರಿಯನ್ನು ಪಾಲಿಸುತ್ತಿದ್ದರು. 2024ರಲ್ಲಿ ಮೂರನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ರಿತಿಕಾ ಅವರು 48ನೇ ರ‍್ಯಾಂಕ್ ಪಡೆಯುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026