Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ರೋಹಿತ್ ವೇಮುಲಾ ಪ್ರತಿಭಟನೆ ಪ್ರಕರಣ: 15 ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ 2016ರಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ 15 ವಿದ್ಯಾರ್ಥಿಗಳಿಗೆ ಹೈಕೋರ್ಟ್‌ನಿಂದ ಬಹುದೊಡ್ಡ ರಿಲೀಫ್ ಸಿಕ್ಕಿದೆ. ವಿದ್ಯಾರ್ಥಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸಂಪೂರ್ಣವಾಗಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲಾ ಗ್ರಾಮದ ಮೊಹಮ್ಮದ್ ತುಫೈಲ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಪ್ರತಿಭಟನಾಕಾರರು 'ಅಕ್ರಮ ಸಭೆ' ಸೇರಿದ್ದರು ಎಂಬುದನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಪೀಠ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಬೆಂಗಳೂರಿನ ಸಾರ್ವಜನಿಕ ಮೆರವಣಿಗೆ ಮತ್ತು ಸಭೆಗಳ ನಿಯಂತ್ರಣ ಆದೇಶ-2009 ಅನ್ನು ಉಲ್ಲೇಖಿಸಿದ ನ್ಯಾಯಾಲಯ, ಒಂದೇ ಸ್ಥಳದಲ್ಲಿ 250ಕ್ಕಿಂತ ಹೆಚ್ಚು ಜನರು ಭಾಗವಹಿಸುವ ಕಾರ್ಯಕ್ರಮ ಅಥವಾ ಸಭೆಗಳಿಗೆ ಮಾತ್ರವೇ ಪೊಲೀಸರಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ, ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯಲ್ಲೇ ಪ್ರತಿಭಟನೆಯಲ್ಲಿದ್ದುದ್ದು 100ರಿಂದ 150 ವಿದ್ಯಾರ್ಥಿಗಳು ಮಾತ್ರ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹೀಗಿರುವಾಗ ವಿದ್ಯಾರ್ಥಿಗಳು ಯಾವ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬುದು ಆರೋಪಪಟ್ಟಿಯಲ್ಲಿ ಸ್ಪಷ್ಟವಾಗಿಲ್ಲ ಎಂದು ಪೀಠ ಹೇಳಿದೆ.

ಪೋಲಿಸರ ತನಿಖಾ ವೈಖರಿಯನ್ನು ಪ್ರಶ್ನಿಸಿದ ನ್ಯಾಯಪೀಠ, ಪ್ರತಿಭಟನಾ ಸ್ಥಳದಲ್ಲಿ 100ರಿಂದ 150 ವಿದ್ಯಾರ್ಥಿಗಳಿದ್ದರು ಎಂದು ಪೊಲೀಸರೇ ಹೇಳಿರುವಾಗ, ಕೇವಲ 15 ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಿ ಆರೋಪಿಗಳನ್ನಾಗಿ ಮಾಡಿದ್ದು ಏಕೆ ಎಂದು ಪ್ರಶ್ನಿಸಿತು. ಯಾವುದೇ ಸಭೆಯಲ್ಲಿ ಕೇವಲ ಉಪಸ್ಥಿತರಿದ್ದ ಮಾತ್ರಕ್ಕೇ ವ್ಯಕ್ತಿಯೊಬ್ಬರನ್ನು ಐಪಿಸಿ ಸೆಕ್ಷನ್ 149ರ ಅಡಿಯಲ್ಲಿ ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆ ಸಭೆಯಲ್ಲಿದ್ದವರ ಉದ್ದೇಶ ಅಪರಾಧ ಎಸಗುವುದೇ ಆಗಿತ್ತು ಹಾಗೂ ಆರೋಪಿಯೂ ಅದೇ ಉದ್ದೇಶದಿಂದ ಭಾಗಿಯಾಗಿದ್ದ ಎಂಬುದನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಬೇಕಾಗುತ್ತದೆ ಎಂದು ತಿಳಿಸಿತು.

ಪ್ರಕರಣದ ಹಿನ್ನೆಲೆ: 2016ರಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಜಾತಿ ತಾರತಮ್ಯದ ಆರೋಪದ ಹಿನ್ನೆಲೆಯಲ್ಲಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ಮುಂಭಾಗದಿಂದ ರಾಜಭವನಕ್ಕೆ ಮನವಿ ಸಲ್ಲಿಸಲು ತೆರಳುತ್ತಿದ್ದರು. ಈ ವೇಳೆ ಧ್ವಜಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಪೂರ್ವಾನುಮತಿ ಇಲ್ಲದೆ ಗುಂಪು ಸೇರಿದ್ದಾರೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 2016ರ ಜುಲೈ 20ರಂದು ಐಪಿಸಿ ವಿವಿಧ ಸೆಕ್ಷನ್‌ಗಳಡಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿದ್ಯಾರ್ಥಿಗಳು ರಾಜಭವನಕ್ಕೆ ಮನವಿ ಕೊಡುವ ಶಾಂತಿಯುತ ಉದ್ದೇಶ ಹೊಂದಿದ್ದರೆ ವಿನಃ ಯಾವುದೇ ಅಕ್ರಮ ಉದ್ದೇಶ ಹೊಂದಿರಲಿಲ್ಲ ಎಂದು ವಾದಿಸಿದ್ದರು. ಪ್ರಕರಣದ ಸನ್ನಿವೇಶ, ಸಭೆಯಲ್ಲಿದ್ದವರ ಸಂಖ್ಯೆ ಹಾಗೂ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿದ್ದ ಗಂಭೀರ ಲೋಪಗಳನ್ನು ಪರಿಗಣಿಸಿದ ಹೈಕೋರ್ಟ್, ಸಿಆರ್‌ಪಿಸಿ ಸೆಕ್ಷನ್ 482ರಡಿ ತನ್ನ ವಿಶೇಷ ಅಧಿಕಾರವನ್ನು ಬಳಸಿ, ವಿದ್ಯಾರ್ಥಿಗಳ ಮೇಲಿದ್ದ ಪ್ರಕರಣವನ್ನು ವಜಾಗೊಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!