LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

(RSS) ಚಟುವಟಿಕೆಗಳನ್ನು ನಿಷೇಧಿಸುವ ಯತ್ನ ಖಂಡನೀಯ – ಹಿಂದೂ ಜನಜಾಗೃತಿ ಸಮಿತಿ

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಪ್ರಿಯಾಂಕ ಖರ್ಗೆಯವರು ಮಾನ್ಯ ಮುಖ್ಯಮಂತ್ರಿಯವರಿಗೆ ಕಳುಹಿಸಿರುವ ಪತ್ರವನ್ನು ತೀವ್ರವಾಗಿ ಖಂಡಿಸುತ್ತದೆ. RSS ಸಂಘದ ಚಟುವಟಿಕೆಗಳನ್ನು ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು, ಮೈದಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ನಿಷೇಧಿಸಬೇಕೆಂದು ಹೇಳಿರುವುದು ಸಂಪೂರ್ಣ ಖಂಡನೀಯವಾಗಿದೆ ಇಂದು ಇಂದು ಜನಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷ ಮೋಹನ್ ಗೌಡ ಅವರು ತಿಳಿಸಿದರು.

ಪ್ರತಿಷ್ಠಿತ ಸಂಸ್ಥೆಯಾಗಿರುವ RSS ದೇಶಾದ್ಯಂತ ವಿವಿಧ ಸ್ವಯಂಸೇವಕರ ಮೂಲಕ ಪ್ರಕೃತಿ ವಿಕೋಪ ಮತ್ತು ದುರಂತಗಳ ಸಂದರ್ಭದಲ್ಲಿ ಪ್ರಥಮವಾಗಿ ಸಹಾಯ ಕಾರ್ಯವನ್ನು ಮಾಡುತ್ತದೆ. ಇದನ್ನು ಪರಿಗಣಿಸಿ, 1963 ರಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಆಗಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು RSS ಗೆ ಗಣವೇಶಧಾರಿಗಳಾಗಿ ಭಾಗವಹಿಸಲು ಆಹ್ವಾನ ನೀಡಿದ್ದರು. ಹಾಗೆಯೇ, 2024 ರಲ್ಲಿ ಕೇಂದ್ರ ಸರ್ಕಾರವು RSS ಅನ್ನು ಸಾಮಾಜಿಕ ಸಂಘಟನೆ ಎಂದು ಪರಿಗಣಿಸಿ, ಕಾಂಗ್ರೆಸ್ ಪಕ್ಷದ ಆಡಳಿತವು ಹಿಂದೆ ಹಾಕಿದ್ದ ನಿಷೇಧವನ್ನು ತೆಗೆದು, ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಬಹುದೆಂದು ಆದೇಶ ಹೊರಡಿಸಿದೆ. ಇಂತಹ ರಾಷ್ಟ್ರ ಪ್ರೇಮವನ್ನು ಬೆಳಸುವ ಸಂಘಟನೆಯ ಚಟುವಟಿಕೆಗಳನ್ನು ನಿಷೇಧ ಮಾಡುವುದು ಖಂಡನೀಯ

ವಾಸ್ತವದಲ್ಲಿ, ದೇಶದಲ್ಲಿ ವಿಭಜನೆ ಮತ್ತು ದ್ವೇಷ ಬಿತ್ತುವ ಕಾರ್ಯವನ್ನು ಕಾಂಗ್ರೆಸ್ ಪಕ್ಷವೇ ಮಾಡುತ್ತಿದೆ. ಕರ್ನಾಟಕದಲ್ಲಿ ಜಾತಿ ಸಮೀಕ್ಷೆಗಳನ್ನು ನಡೆಸಿ ಸಮಾಜವನ್ನು ವಿಭಜಿಸುವುದು, ಅಂತಾರಾಷ್ಟ್ರೀಯ ಭಯೋತ್ಪಾದಕ ಜಾಕೀರ್ ನಾಯ್ಕ್ ಸೇರಿದಂತೆ PFI, SDPI ಮುಂತಾದ ವಿಭಜಕ ಶಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಪ್ರಕ್ರಿಯೆಯಾಗಿದೆ. ಈ ಹಿನ್ನೆಲೆಯಲ್ಲಿ, ಸಂಘದ ಚಟುವಟಿಕೆಯನ್ನು ನಿಷೇಧಿಸುವ ಯತ್ನವು ಹಿಂದೂ ಧರ್ಮವನ್ನು ನಿಷೇಧಿಸುವ ಷಡ್ಯಂತ್ರದ ಭಾಗವಾಗಿದೆ.
ಹಿಂದೂ ಜನಜಾಗೃತಿ ಸಮಿತಿ ಈ ನಿಷೇಧದ ಯತ್ನವನ್ನು ತೀವ್ರವಾಗಿ ಖಂಡಿಸುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ