LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೋಟೆ ನಗರಿಯಲ್ಲಿ ಆರ್.ಎಸ್.ಎಸ್. ಪಥಸಂಚಲ..!

 

ಚಿತ್ರದುರ್ಗ : ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ಸಾಧನೆಗೆ ನೂರು ವರ್ಷದ ಸಂಭ್ರಮ ತುಂಬಿದ ಹಿನ್ನಲೆಯಲ್ಲಿ ಭಾನುವಾರ ಕೋಟೆ ನಗರ ಚಿತ್ರದುರ್ಗ ನಗರ ಮತ್ತು ಗ್ರಾಮಾಂತರÀವತಿಯಿಂದ ಶತಾಬ್ದಿ ಪಥಸಂಚಲನದಲ್ಲಿ ಗಣ ವೇಷದಾರಿಗಳು ಶಿಸ್ತು ಬದ್ದ ಆಕರ್ಷಕ ಪಥ ಸಂಚಲನವನ್ನು ನಡೆಸಲಾಯಿತು.

ನಗರದ ರಂಗಯ್ಯನ ಬಾಗಿಲ ಸುರಕ್ಷಾ ಕಾಲೇಜು ಆವರಣದಲ್ಲಿ ಸೇರ್ಪಡೆಯಾಗಿ ಅಲ್ಲಿಂದ ರಂಗಯ್ಯನ ಬಾಗಿಲು ದೊಡ್ಡಪೇಟೆ, ಉಚ್ಚಂಗಿಯಲ್ಲಮ್ಮ ದೇವಾಲಯ, ತರಾಸು ಬೀದಿ ಮಾರ್ಗವಾಗಿ ಏಕನಾಥೇಶ್ವರಿ ಪಾದಗುಡಿ, ಕೋಟೆ ರಸ್ತೆ, ಕಾಮನಬಾವಿ ಬಡಾವಣೆ, ಪೋಸ್ಟ್ ಅಫೀಸ್ ರಸ್ತೆ, ಫಿಲ್ಟರ್ ಹೌಸ ರಸ್ತೆ, ಕರುವಿನ ಕಟ್ಟೆ ವೃತ್ತ, ಜೋಗಿಮಟ್ಟಿ ರಸ್ತೆ ಮೊದಲನೇ ತಿರುವು, ಜೋಗಿಮಟ್ಟಿ ರಸ್ತೆ, ಆಸ್ಪತ್ರೆ ವೃತ್ತದ ಮೂಲಕ ವಾಪಾಸ್ಸ್ ಸುರಕ್ಷಾ ಕಾಲೇಜನ್ನು ತಲುಪಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಪಥ ಸಂಚಲನ ಸಾಗುವ ದಾರಿಯಲ್ಲಿ ಮನೆಗಳ ಮುಂದೆ ನೀರನ್ನು ಹಾಕಿ ಬಣ್ಣ ಬಣ್ಣದ ರಂಗೋಲಿಯನ್ನು ಹಾಕುವುದರ ಮೂಲಕ ಪಥ ಸಂಚಲವನ್ನು ಸ್ವಾಗತಿಸಲಾಯಿತು. ಕೆಲವರ ಮನೆಯ ಮುಂದೆ ಭಾರತಾಂಬೆಯ ಭಾವಚಿತ್ರವನ್ನು ಇರಿಸುವುದರ ಮೂಲಕ ಸ್ವಾಗತವನ್ನು ಮಾಡಲಾಯಿತು. ಇದ್ದಲ್ಲದೆ ಗಣ ವೇಷಧಾರಿಗಳ ಮೇಲೆ ಪುಷ್ಪ ವೃಷ್ಟಿಗೈದು ಭಾರತಾ ಮಾತಾಕಿ ಜೈ , ಜೈ ಶ್ರೀರಾಮ್ ಎನ್ನುವ ಜಯ ಘೋಷ ಕೂಗಿ ದೇಶ ಪ್ರೇಮವನ್ನು ಮೆರೆದರು.

ಈ ಪಥ ಸಂಚಲದಲ್ಲಿ ಭಾಗವಹಿಸಿದ ಗಣ ವೇಷಧಾರಿಗಳು ಖಾಕಿ ಬಣ್ಣದ ಪ್ಯಾಂಟ್, ಶುಂಭ್ರ ಬಿಳಿ ವರ್ಣದ ಅಂಗಿ ತಲೆಯ ಮೇಲೆ  ಕರಿ ಟೋಪಿಯನ್ನು ಹಾಕಿಕೊಂಡು ಕೈಯಲ್ಲಿ ದಂಡವನ್ನು ಹಿಡಿದು ಸಾವಿರಾರು ಸ್ವಯಂ ಸೇವಕರು ಶಿಸ್ತು ಬದ್ದವಾಗಿ ಹೆಜ್ಜೆ ಹಾಕುತ್ತಾ ಸಾಗುತ್ತಿದ್ದ ದೃಶ್ಯ ಮನ ಮೋಹಕವಾಗಿತ್ತು ಇದರಲ್ಲಿ ಸಣ್ಣ ಸಣ್ಣ ಮಕ್ಕಳು ಸಹಾ ಈ ವೇಷವನ್ನು ಧರಿಸಿ ಭಾಗವಹಿಸಿದ್ದು ನೋಡುಗರ ಮನ ಸೆಳೆಯಿತು.

ಈ ಪಥ ಸಂಚಲನದಲ್ಲಿ ಭಾರತಾಂಭೆ, ಒನಕೆ ಓಬವ್ವ, ಡಾ.ಬಿ.ಆರ್ ಆಂಬೇಡ್ಕರ್ ಹಾಗೂ ದೇಶವನ್ನು ಕಾಯುವ ಸೈನಿಕರ ವೇಷವನ್ನು ಮಕ್ಕಳು ಧರಿಸಿದ್ದರು, ಇದೇ ಸಂದರ್ಭದಲ್ಲಿ ಡಾ.ಜಿ, ಹಾಗೂ ಗೂರೂಜಿ ಯವರ ಭಾವಚಿತ್ರವನ್ನು ಮೆರವಣಿಗೆಯಲ್ಲಿ ಇರಿಸಲಾಯಿತು. ಸುಶ್ರಾವ್ಯವಾದ ಡ್ರಮ್ ಮತ್ತಿತರ ವಾದ್ಯಗಳಿಂದ ಮೊಳಗಿದ ಹಿಮ್ಮೇಳ ಪಥ ಸಂಚಲನಕ್ಕೆ ಮೆರುಗು ನೀಡಿತ್ತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಹ ಚಾಲಕರಾದ ನಾಗೇಶ್, ರಾಜ ಕುಮಾರ್ ರಾಮಕಿರಣ್, ಪ್ರಬಾಕರ್, ಶ್ರೀನಾಥ್,ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಯುವ ಮುಖಂಡರಾದ ಅನಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜನ್, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಗ್ರಾಮಾಂತರ ಅಧ್ಯಕ್ಷ ಕೆ ನಾಗರಾಜ್, ಭಾರ್ಗವಿ ದ್ರಾವಿಡ್, ನಾಗರಾಜ್ ಸಂಗಂ, ಉಮೇಶ್ ಕಾರಜೋಳ, ರುದೇಶ್, ಜಿ.ಎಂ.ಸುರೇಶ್, ನಂದಿ ನಾಗರಾಜ್ ಟಿ.ಜಿ ನರೇಂದ್ರನಾಥ್, ಬದರಿನಾಥ್, ನಾಗರಾಜ್ ಬೇದ್ರೇ ಸೇರಿದಂತೆ ಇತರರು ಭಾಗವಹಿಸಿದ್ದರು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026