Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕರ್ನಾಟಕ ಏಕೀಕರಣದ ರೂವಾರಿ ನಿಜಲಿಂಗಪ್ಪ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಹನೀಯರ ವಿಚಾರಗಳನ್ನು ಸಮಾಜಕ್ಕೆ ತಿಳಿಸದಿದ್ದರೆ ಅದುವೆ ಸಾಂಸ್ಕೃತಿಕ ದರಿದ್ರವೆಂದು ಎಸ್.ಜೆ.ಎಂ. ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ಹೇಳಿದರು.


ಸೀಬಾರದಲ್ಲಿರುವ ಎಸ್.ಎನ್.ರವರ ಸ್ಮಾರಕದ ಸಮೀಪ ಮಂಗಳವಾರ ಎಸ್.ನಿಜಲಿಂಗಪ್ಪನವರ ೧೨೩ ನೇ ಜನ್ಮದಿನದ ಸಾನಿಧ್ಯ ವಹಿಸಿ ಮಾತನಾಡಿದರು.

ಕರ್ನಾಟಕ ಏಕೀಕರಣದ ರೂವಾರಿಯಾಗಿದ್ದ ಎಸ್.ನಿಜಲಿಂಗಪ್ಪನವರು ಮುರುಘಾಮಠದ ಪಾರಂಪರಿಕ ಭಕ್ತರಾಗಿದ್ದರು. ಜಯದೇವ ಜಗದ್ಗುರುಗಳ ಜೊತೆ ಅವಿನಾಭಾವ ಸಂಬಂಧವಿತ್ತು. ಅಪರೂಪದ ರಾಜಕಾರಣಿ. ಕನ್ನಡ ನಾಡು, ನುಡಿಗೆ ಅಪಾರ ಕೊಡುಗೆ ನೀಡಿದ್ದಾರೆಂದು ಸ್ಮರಿಸಿದರು.

ನೇರ, ನಿಷ್ಟುರವಾದಿ, ನಿಷ್ಕಳಂಕ ರಾಜಕಾರಣಿಯಾಗಿದ್ದ ಎಸ್.ನಿಜಲಿಂಗಪ್ಪನವರ ಆಚಾರ-ವಿಚಾರಗಳನ್ನು ಪಠ್ಯದಲ್ಲಿ ಸೇರಿಸಿ ಇಂದಿನ ಪೀಳಿಗೆಗೆ ಪರಿಚಯಿಸಬೇಕು. ಈಗಿನ ರಾಜಕಾರಣಿಗಳಿಗೆ ಎಸ್.ಎನ್.ರವರು ಮಾದರಿಯಾಗಿದ್ದಾರೆಂದರು.

ಎಸ್.ಎನ್.ಮೆಮೋರಿಯಲ್ ಟ್ರಸ್ಟ್‌ನ ಗೌರವ ಕಾರ್ಯದರ್ಶಿ, ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಮಾತನಾಡಿ ಎಸ್.ಎನ್.ರವರ ವ್ಯಕ್ತಿತ್ವ ದೊಡ್ಡದು. ಪಾರದರ್ಶಕ ರಾಜಕಾರಣಿ, ಭ್ರಷ್ಟಾಚಾರದಿಂದ ದೂರವಿದ್ದರು. ವಕೀಲ ವೃತ್ತಿಯಿಂದ ಗಳಿಸಿದ ಸಂಪಾದನೆಯಲ್ಲಿ ಕಟ್ಟಿಸಿಕೊಂಡ ನಿವಾಸದಲ್ಲಿಯೇ ಕೊನೆಯವರೆಗೂ ಜೀವಿಸಿದರು. ಸರ್ಕಾರದ ಬಂಗಲೆ ಪಡೆದುಕೊಳ್ಳಲಿಲ್ಲ. ಚಿಕ್ಕಂದಿನಲ್ಲಿ ಸಾಕಷ್ಟು ಬಡತನ ಅನುಭವಿಸಿದವರು. ಅವರೊಬ್ಬ ಅಪರೂಪದ ರಾಜಕಾರಣಿಯಾಗಿದ್ದರೆಂದು ಗುಣಗಾನ ಮಾಡಿದರು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ, ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಸಾನಿಧ್ಯ ವಹಿಸಿದ್ದರು. ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ ವೇದಿಕೆಯಲ್ಲಿದ್ದರು.

ಎಸ್.ಎನ್.ಮೆಮೋರಿಯಲ್ ಟ್ರಸ್ಟ್‌ನ ಟ್ರಸ್ಟಿ ಎಸ್.ಷಣ್ಮುಖಪ್ಪ, ಶಾರದ ಬ್ರಾಸ್‌ಬ್ಯಾಂಡ್‌ನ ಗುರುಮೂರ್ತಿ, ರೊ.ಎಸ್.ವೀರೇಶ್, ಬಸವೇಶ್ವರ ವಿದ್ಯಾಸಂಸ್ಥೆಯ ಕೆ.ವಿ.ಶಂಕರಪ್ಪ

ಎಂ.ವಿ.ಎಂ.ಸ್ವಾಮಿ, ರುದ್ರೇಶ್, ಲೋಕನಾಥ್, ರುದ್ರಮೂರ್ತಿ, ಮಂಜುನಾಥ್, ರೊ.ವೀರಭದ್ರಸ್ವಾಮಿ, ಇಟಗಿ ಜಯದೇವಮೂರ್ತಿ, ಮುರುಗೇಶ್ ಡಿ.ವಿ. ಅನಿತ ಮುರುಗೇಶ್ ಇನ್ನು ಅನೇಕರು ಎಸ್.ಎನ್.ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ