Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜ್ಞಾನೇಶ ಕುಮಾರ ಅವರನ್ನು ಪದಚ್ಯುತಗೊಳಿಸಿ, ತನಿಖೆಗೆ ಆದೇಶಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಸೆ. 23 : (ಸಮದರ್ಶಿ ಸುದ್ದಿ) - ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಇಬ್ಬರು ಆಯುಕ್ತರು ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿರುವ ವರದಿಗಳ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಪದಚ್ಯುತಗೊಳಿಸಿ ಅವರ ವಿರುದ್ಧ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿಗಳು ನಿರ್ದೇಶನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬುಧವಾರ ಪ್ರತಿಕ್ರಿಯಿಸಿರುವ ಅವರು, ಚುನಾವಣಾ ಆಯೋಗದೊಳಗಿನ ಬೆಳವಣಿಗೆಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದ್ದಾರೆ. ಮೂವರು ಸದಸ್ಯರ ಆಯೋಗದಲ್ಲಿ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಕೆಲವು ನಿರ್ಧಾರಗಳ ಕುರಿತು ಲಿಖಿತ ಆಕ್ಷೇಪ ದಾಖಲಿಸಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ. ಇಂತಹ ಆಕ್ಷೇಪಗಳು ದಾಖಲಾಗಿರುವ ಬಗ್ಗೆ ಇತರ ಪ್ರತಿಪಕ್ಷ ನಾಯಕರೂ ಪ್ರಶ್ನೆ ಎತ್ತಿದ್ದಾರೆ.

ಹೊಸ ಮತದಾರರ ನೋಂದಣಿಗೆ ಬಳಸುವ ನಮೂನೆ–6ರ ಬದಲಾವಣೆ, ಮತದಾರರ ಹೆಸರು ಸೇರ್ಪಡೆ ಮತ್ತು ತೆಗೆದುಹಾಕುವಿಕೆ ಹಾಗೂ ಮತದಾರರ ಪಟ್ಟಿಯ ದತ್ತಾಂಶದ ಕೇಂದ್ರೀಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆಯುಕ್ತರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಮತದಾರರ ಪಟ್ಟಿಯಂತಹ ಸೂಕ್ಷ್ಮ ವ್ಯವಸ್ಥೆಯ ನಿಯಂತ್ರಣ ಯಾರ ಕೈಯಲ್ಲಿದೆ? ಯಾವ ಅಧಿಕಾರದಡಿ ಬದಲಾವಣೆ ಮಾಡಲಾಗುತ್ತಿದೆ? ರಾಜ್ಯಮಟ್ಟದ ಕಾನೂನುಬದ್ಧ ಅಧಿಕಾರಿಗಳಿಗೆ ಸಂಪೂರ್ಣ ಪ್ರವೇಶ ಏಕೆ ಇಲ್ಲ?” ಎಂಬ ಪ್ರಶ್ನೆಗಳಿಗೆ ಆಯೋಗ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳದ ಎಸ್‌ಐಆರ್‌ ಪ್ರಕ್ರಿಯೆಯಲ್ಲೂ ನ್ಯಾಯಾಂಗ ಅಧಿಕಾರಿಗಳ ಆದೇಶದ ನಂತರ ಮತದಾರರ ಸೇರ್ಪಡೆಗೆ ಸಂಬಂಧಿಸಿ ದೊಡ್ಡ ಪ್ರಮಾಣದಲ್ಲಿ ಮೇಲ್ಮನವಿಗಳು ಸಲ್ಲಿಕೆಯಾಗಿರುವ ಬಗ್ಗೆ ಪ್ರಶ್ನೆಗಳಿವೆ. ಅವುಗಳನ್ನು ಯಾರು ಮತ್ತು ಯಾರ ಅನುಮತಿಯೊಂದಿಗೆ ಸಲ್ಲಿಸಿದರು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಮತದಾನದ ಹಕ್ಕನ್ನು ರಕ್ಷಿಸುವ ಹೊಣೆ ಹೊತ್ತಿರುವ ಚುನಾವಣಾ ಆಯೋಗದ ಕಾರ್ಯವೈಖರಿ ಸಂವಿಧಾನ ಮತ್ತು ಕಾನೂನಿನ ಪ್ರಕಾರ ಸಾಂಸ್ಥಿಕವಾಗಿರಬೇಕೇ ಹೊರತು ಒಬ್ಬ ವ್ಯಕ್ತಿಯ ನಿರ್ಧಾರಕ್ಕೆ ಸೀಮಿತವಾಗಬಾರದು” ಎಂದು ಅವರು ಹೇಳಿದ್ದಾರೆ.

ಎಸ್‌ಐಆರ್‌, ಮತದಾರರ ಪಟ್ಟಿಯಲ್ಲಿನ ಬದಲಾವಣೆ ಹಾಗೂ ಆಯೋಗದೊಳಗಿನ ಆಕ್ಷೇಪಗಳ ಕುರಿತು ಸಂಪೂರ್ಣ ಪಾರದರ್ಶಕತೆ ಮತ್ತು ಸಾರ್ವಜನಿಕ ವಿವರಣೆ ನೀಡಬೇಕು. ಅಗತ್ಯವಿದ್ದರೆ ಸ್ವತಂತ್ರ ಪರಿಶೀಲನೆಯನ್ನೂ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ‘ಸರ್ವಾಧಿಕಾರಿ ನಡೆ’ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಇದರಿಂದ ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ. ಆದ್ದರಿಂದ ರಾಷ್ಟ್ರಪತಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ಕ್ರಮ ಕೈಗೊಂಡು ತನಿಖೆಗೆ ನಿರ್ದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ