Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಸುರಕ್ಷಿತ ಗರ್ಭಪಾತ ಮಹಿಳೆಯರ ಆರೋಗ್ಯದ ಹಕ್ಕು: ಮೋಕಾದಲ್ಲಿ ಜಾಗೃತಿ ಕಾರ್ಯಕ್ರಮ


ಬಳ್ಳಾರಿ,01: ಅನಪೇಕ್ಷಿತ ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕಾನೂನುಬದ್ಧ, ಸುರಕ್ಷಿತ ಹಾಗೂ ಗುಣಮಟ್ಟದ ಗರ್ಭಪಾತ ಸೇವೆಗಳು ದೊರೆಯುವುದು ಅತ್ಯಂತ ಅವಶ್ಯಕವಾಗಿದೆ ಎಂದು ಬೆಂಗಳೂರಿನ ಐಪಾಸ್ ತಾಂತ್ರಿಕ ವಿಭಾಗದ ಸಮಗ್ರ ಗರ್ಭಪಾತ ಕಾರ್ಯಕ್ರಮದ ತಜ್ಞ ದೊಡ್ಡನಗೌಡ ಜಿ. ಅವರು ಅಭಿಪ್ರಾಯಪಟ್ಟರು.
ಅಂತಾರಾಷ್ಟಿçÃಯ ಸುರಕ್ಷಿತ ಗರ್ಭಪಾತ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ವಿಭಾಗ ಬಳ್ಳಾರಿ ಹಾಗೂ ಮೋಕಾದ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗರ್ಭಧಾರಣೆಯ ಆರಂಭಿಕ ಹಂತದಲ್ಲಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಮಾತ್ರೆಗಳ ಮೂಲಕ ಗರ್ಭಪಾತ ಮಾಡುವುದು ಸುರಕ್ಷಿತವಾಗಿದ್ದು, ಮೂರು ತಿಂಗಳೊಳಗಿನ ಸೇವೆಗಳು ಸುಲಭವಾಗಿ ದೊರೆಯುವಂತಿರಬೇಕು ಎಂದು ತಿಳಿಸಿದರು.
ಭಾರತದಲ್ಲಿ 1971ರ ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಿದ್ದುಪಡಿ ತರಲಾಗಿದ್ದು, 20 ವಾರಗಳವರೆಗೆ ಒಬ್ಬ ನೋಂದಾಯಿತ ವೈದ್ಯರ ಶಿಫಾರಸು ಹಾಗೂ 20 ರಿಂದ 24 ವಾರಗಳವರೆಗೆ ವಿಶೇಷ ಸಂದರ್ಭಗಳಲ್ಲಿ ಇಬ್ಬರು ವೈದ್ಯರ ಅನುಮತಿಯೊಂದಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶವಿದೆ. ಗರ್ಭಪಾತ ಪಡೆಯುವ ಮಹಿಳೆಯ ವೈಯಕ್ತಿಕ ವಿವರ ಹಾಗೂ ಗುರುತನ್ನು ಸಂಪೂರ್ಣವಾಗಿ ಗೌಪ್ಯವಾಗಿಡಲಾಗುತ್ತದೆ ಎಂದು ತಿಳಿಸಿದರು.
ಮೋಕಾ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ಸೈಯದಾ ಹಫೀಜಾ ಅವರು ಸುರಕ್ಷಿತ ಗರ್ಭಪಾತ ವಿಧಾನಗಳ ಕುರಿತು ಮಾಹಿತಿ ನೀಡಿ, ಗರ್ಭಾವಸ್ಥೆಯ ಅವಧಿಯನ್ನು ಆಧರಿಸಿ ವೈದ್ಯಕೀಯ ಗರ್ಭಪಾತ (ಮಾತ್ರೆಗಳ ಮೂಲಕ) ಅಥವಾ ಶಸ್ತçಚಿಕಿತ್ಸಾ ಗರ್ಭಪಾತ ವಿಧಾನಗಳನ್ನು ವೈದ್ಯರು ನಿರ್ಧರಿಸುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರ ಚೀಟಿ ಇಲ್ಲದೆ ಸ್ವಂತ ನಿರ್ಧಾರದಿಂದ ಮಾತ್ರೆಗಳನ್ನು ಸೇವಿಸಬಾರದು ಎಂದು ಹೇಳಿದರು.
ಗರ್ಭಪಾತದ ನಂತರ ಸೋಂಕು ತಡೆಗಟ್ಟಲು ಅಗತ್ಯ ವಿಶ್ರಾಂತಿ, ವೈದ್ಯರು ಸೂಚಿಸಿದ ಮಾತ್ರೆಗಳ ಸೇವನೆ ಮತ್ತು ನೈರ್ಮಲ್ಯ ಕಾಪಾಡುವುದು ಮುಖ್ಯ. ಸರ್ಕಾರಿ ಅನುಮೋದಿತ ಆಸ್ಪತ್ರೆ ಅಥವಾ ಅರ್ಹ ಸ್ತಿçÃರೋಗ ತಜ್ಞರ ಮಾರ್ಗದರ್ಶನದಲ್ಲೇ ಗರ್ಭಪಾತ ಮಾಡಿಸಿಕೊಳ್ಳಬೇಕು; ಅನಧಿಕೃತ ಕ್ಲಿನಿಕ್ ಅಥವಾ ಮನೆಮದ್ದುಗಳಿಗೆ ಮೊರೆಹೋಗುವುದು ಜೀವಕ್ಕೆ ಅಪಾಯಕಾರಿ ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಬಿ., ಉಪನ್ಯಾಸಕರಾದ ಡಾ. ಕಲಾವತಿ, ರೆಡ್‌ಕ್ರಾಸ್ ಸಂಚಾಲಕ ಮಹಮ್ಮದ್ ಅಸ್ಲಾಂ ಪೀರ್‌ಜಾದೆ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಜೆ., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಮ್, ನರ್ಸಿಂಗ್ ಅಧಿಕಾರಿ ಸಿದ್ದಲಿಂಗೇಶ್ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
One attachment  •  Scanned by Gmail

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ