Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ರೋಗಿಗಳ ಸುರಕ್ಷಿತ ಆರೈಕೆ ನಮ್ಮೆಲ್ಲರ ಜವಾಬ್ದಾರಿ: ಡಾ. ವೀರೇಂದ್ರ ಕುಮಾರ್ ಕೆ.ಜಿ

ಬಳ್ಳಾರಿ,ಸೆ.24: ರೋಗಿಗಳಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಆರೋಗ್ಯ ಸೇವೆಗಳನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ರೋಗಿಗಳ ಸಮಗ್ರ ಆರೈಕೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ವೀರೇಂದ್ರ ಕುಮಾರ್ ಕೆ.ಜಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ವಿಭಾಗ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗುಗ್ಗರಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಗುಗ್ಗರಹಟ್ಟಿಯ ನಗರ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ವಿಶ್ವ ರೋಗಿಗಳ ಸುರಕ್ಷತಾ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ವರ್ಷ ಸೆಪ್ಟೆಂಬರ್ 16 ರಿಂದ 20 ರವರೆಗೆ ವಿಶ್ವ ರೋಗಿಗಳ ಸುರಕ್ಷತಾ ದಿನ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ರೋಗಿಗಳಿಗೆ ಸುರಕ್ಷಿತ, ಗುಣಮಟ್ಟದ ಮತ್ತು ಪರಿಣಾಮಕಾರಿ ಆರೋಗ್ಯ ಸೇವೆ ನೀಡುವ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ “ಸಾಂಕ್ರಾಮಿಕವಲ್ಲದ ರೋಗಿಗಳಿಗೆ ಸುರಕ್ಷಿತ ಆರೈಕೆ” ಎಂಬ ಘೋಷವಾಕ್ಯದೊಂದಿಗೆ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಇಂದಿನ ದಿನಗಳಲ್ಲಿ ಹೃದಯರೋಗ, ಮಧುಮೇಹ, ಕ್ಯಾನ್ಸರ್ ಹಾಗೂ ದೀರ್ಘಕಾಲದ ಉಸಿರಾಟದ ಸಮಸ್ಯೆಗಳು ವ್ಯಾಪಕವಾಗಿ ಕಂಡುಬರುತ್ತಿವೆ. ಇಂತಹ ಕಾಯಿಲೆಗಳಿಗೆ ಅಲ್ಪಾವಧಿ ಚಿಕಿತ್ಸೆ ಸಾಲದು; ರೋಗಿಗಳು ಹಲವು ವರ್ಷಗಳ ಕಾಲ ನಿಯಮಿತ ತಪಾಸಣೆ, ಔಷಧಿ ಸೇವನೆ ಮತ್ತು ವೈದ್ಯಕೀಯ ಆರೈಕೆ ಪಡೆಯಬೇಕಾಗುತ್ತದೆ. ಹೀಗಾಗಿ ಪ್ರತಿಯೊಂದು ಹಂತದಲ್ಲೂ ರೋಗಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.
ಸುರಕ್ಷತೆ ಎಂದರೆ ಕೇವಲ ಆಸ್ಪತ್ರೆಯ ತಪ್ಪುಗಳನ್ನು ತಡೆಯುವುದಷ್ಟೇ ಅಲ್ಲ; ನಿಖರ ರೋಗ ನಿರ್ಣಯ, ಸೂಕ್ತ ಔಷಧಿ, ಸೋಂಕು ನಿಯಂತ್ರಣ ಹಾಗೂ ರೋಗಿಗಳೊಂದಿಗೆ ಸಕಾರಾತ್ಮಕ ಸಂವಹನ ಹೊಂದುವುದಾಗಿದೆ. ಇದಲ್ಲದೆ, ರೋಗಿಗಳು ಕೂಡ ವೈದ್ಯರ ಸಲಹೆಯಂತೆ ನಿಯಮಿತವಾಗಿ ಔಷಧಿ ಸೇವಿಸುವುದು ಮತ್ತು ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬAದರೂ ತಕ್ಷಣ ಆರೋಗ್ಯ ಕಾರ್ಯಕರ್ತರಿಗೆ ತಿಳಿಸುವ ಮೂಲಕ ತಮ್ಮ ಸುರಕ್ಷತೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ ಅವರು ಮಾತನಾಡಿ, ರೋಗಿಗಳ ಉತ್ತಮ ಆರೈಕೆ ಹಾಗೂ ಅವರ ಗುಣಮುಖವಾಗುವಿಕೆಯಿಂದ ಇಡೀ ಸಮಾಜಕ್ಕೆ ಸಂತೋಷ ಸಿಗುತ್ತದೆ ಎಂದು ತಿಳಿಸಿ, ಕ್ಷಯರೋಗ ನಿಯಂತ್ರಣದ ಕುರಿತು ವಿವರಣೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ವೈದ್ಯಾಧಿಕಾರಿ ಡಾ. ಶಗುಪ್ತಾ ವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಎಸ್. ಕರ್ಜಗಿ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಗಂಗಮ್ಮ, ಇಲಾಖೆಯ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ರೋಗಿಗಳ ಸುರಕ್ಷತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ