LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

1984ರ ಸಿಖ್ ವಿರೋಧಿ ದಂಗೆ ಕೇಸ್: ಫೆ.25 ರಂದು ಸಜ್ಜನ್ ಕುಮಾರ್‌ಗೆ ಶಿಕ್ಷೆ ಪ್ರಮಾಣ ಪ್ರಕಟ

ನವದೆಹಲಿ : 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 25ರಂದು ನ್ಯಾಯಾಲಯ ಪ್ರಕಟಿಸಲಿದೆ.

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ಫೆಬ್ರವರಿ 12ರಂದು ರೌಸ್ ಅವೆನ್ಯೂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಇಂದು ಸಜ್ಜನ್ ಕುಮಾರ್ ಅವರ ಶಿಕ್ಷೆಯ ಕುರಿತಾದ ವಾದಗಳನ್ನು ಕೋರ್ಟ್ ಆಲಿಸಿದೆ. ಸಜ್ಜನ್ ಕುಮಾರ್ ಅವರಿಗೆ ನಿರ್ಭಯಾ ಮತ್ತು ಇತರ ಪ್ರಕರಣಗಳಲ್ಲಿ ಮಾರ್ಗಸೂಚಿಗಳ ಆಧಾರದ ಮೇಲೆ ಮರಣದಂಡನೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಮನವಿ ಮಾಡಿಕೊಂಡಿದ್ದಾರೆ.

ಸಜ್ಜನ್ ಕುಮಾರ್ ಅವರ ಮೇಲೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬೃಹತ್ ಗುಂಪನ್ನು ಮುನ್ನಡೆಸಿದ್ದಾರೆ ಎಂದು ಆರೋಪವಿದೆ. ದೂರಿನ ಅನುಸಾರ, ಕೋಪಗೊಂಡ ಗುಂಪೊಂದು ದೂರುದಾರ ಜಸ್ವಂತ್ ಅವರ ಪತ್ನಿಯ ಮನೆಯ ಮೇಲೆ ದಾಳಿ ಮಾಡಿ, ಅವರ ಪತಿ ಮತ್ತು ಮಗನನ್ನು ಹತ್ಯೆ ಮಾಡಿತ್ತು. ನವೆಂಬರ್ 1, 1984ರಂದು ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣದೀಪ್ ಸಿಂಗ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜ್ಜನ್ ಅವರಿಗೆ ಶಿಕ್ಷೆ ನೀಡಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST