E-PAPER
17 Nov 2026, 05:29:08 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ.27: ಹಳ್ಳಿಗಳಲ್ಲಿ ನಿರ್ಮಿಸುವ ಸಮುದಾಯ ಭವನಗಳು ಎಲ್ಲ ಸಮುದಾಯ ಹಬ್ಬ ಹರಿದಿನಗಳು, ಮದುವೆ, ಸೀಮಂತ, ನಾಮಕರಣ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಉಪಯೋಗವಾಗುವ ಮೂಲಕ ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕೆ ಕಾರಣವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಭಾನುವಾರ ನ-23 ರಂದು ಅರಭಾವಿ ವಿಧಾನಸಭಾ ಮತಕ್ಷೇತ್ರದ ಯಾದವಾಡ ಗ್ರಾಮದ ಬಳಿಗಾರ ಒಣಿಯ ಶ್ರೀ ಲಿಂಗ ಬಸವೇಶ್ವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಅವರು ಮಾತನಾಡಿದರು.

ಯಾದವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಈಗಾಗಲೇ ರಾಜ್ಯಸಭಾ ಸಂಸದರ ನಿಧಿಯಿಂದ ಲಿಂಗ ಬಸವೇಶ್ವರ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂ, ಮೈಲಾರಲಿಂಗ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂ, ಘಟಗಿ ಬಸವೇಶ್ವರ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ ರೂ, ಕೊಪದಟ್ಟಿ ಗ್ರಾಮದ ನಿಂಗಮ್ಮಾದೇವಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ ರೂ, ಕೊಪದಟ್ಟಿ ಗ್ರಾಮದಲ್ಲಿ ಬಸ್‌ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ 5 ಲಕ್ಷ ರೂ. ಒಟ್ಟು ಯಾದವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 35 ಲಕ್ಷ ರೂ.ಗಳ ಅನುದಾನವನ್ನು ನೀಡಿದ್ದೇನೆ. ನನ್ನ ಸೇವಾಧಿಯಲ್ಲಿ ಎಷ್ಟು ಸಾಧ್ಯವೊ ಅಷ್ಟು ಜನರಿಗೆ ರಾಜ್ಯಸಭಾ ಸಂಸದರ ಅನುದಾನವನ್ನು ಮುಟ್ಟಿಸುವಂತಹ ಪ್ರಾಮಾಣಿಕ ಪ್ರಯತ್ನ ಮುಂದುವರೆಯಲಿದೆ ಎಂದರು.

ಯಾದವಾಡ ಗ್ರಾಮದ ಅಭಿವೃದ್ದಿಯಲ್ಲಿ ನಾನು ಕೂಡಾ ಅಳಿಲು ಸೇವೆ ಸಲ್ಲಿಸುತ್ತಿದ್ದೇನೆ. ಅದೇ ರೀತಿ ಬರುವಂತಹ ದಿನಗಳಲ್ಲಿ ಯುವಕರ ಅನುಕೂಲಕ್ಕಾಗಿ ಗ್ರಾಮದಲ್ಲಿ ಒಂದು ಓಪ್ ಜಿಮ್ ಸೌಲಭ್ಯ ಒದಗಿಸಿ ಕೊಡಲು ನಾನು ಪ್ರಯತ್ನಿಸುತ್ತಿದ್ದೇನೆ, ಇನ್ನೂ ಹೆಚ್ಚು ಸೇವೆಯನ್ನು ಮಾಡಲು ನಾನು ಸಿದ್ದನಿದ್ದೇನೆ, ತಾವು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಕೊಪದಟ್ಟಿ ಗ್ರಾಮದಲ್ಲಿ ಸಂಸದರ ನಿಧಿಯಿಂದ ನಿರ್ಮಾಣಗೊಂಡ ಬಸ್ ಪ್ರಯಾಣಿಕರ ತಂಗುದಾಣದ ಉದ್ಗಾಟನೆ ನೇರವೇರಿಸಿದರು.

ಪೂಜ್ಯ ಶ್ರೀ ಚೌಕೇಶ್ವರ ವಿಶ್ವಾರಾಧ್ಯ ಸ್ವಾಮಿಜಿಗಳು ಸಾನಿಧ್ಯ ವಹಿಸಿದ್ದರು. ಪ್ರಮುಖರಾದ ಶ್ರೀಶೈಲ ಪೂಜೇರಿ, ಬಸವರಾಜ ಹಿಡಕಲ್‌, ಹಣಮಂತ ಹುಚ್ಚರಡ್ಡಿ, ವಿಠ್ಠಲ ಕಲ್ಲಮುಡಿ, ರಾಮನಗೌಡ ಪಾಟೀಲ, ಅಮೀನಸಾಬ ಯಳ್ಳೂರ, ನಿಂಗಪ್ಪ ಅರಿಕೇರಿ, ಈಶ್ವರ ಬಾಗಿ, ರವಿ ಅಮರಾಣಿ, ಪ್ರಕಾಶ ಹಿಡಕಲ್‌, ಬಸಪ್ಪ ಮುದ್ದಾಪೂರ, ಭೀರಪ್ಪ ಪೂಜೇರಿ, ಮುಪ್ಪಯ್ಯ ಹಿರೇಮಠ ಕೊಪದಟ್ಟಿ ಗ್ರಾ.ಪಂ ಸದಸ್ಯ ಗೋವಿಂದ ಉದಪುಡಿ, ಶಿವಲಿಂಗಪ್ಪ ಹುಬ್ಬಳ್ಳಿ, ಬಿ.ಎಚ್.‌ ಪಾಟೀಲ, ಶ್ರೀನಿವಾಸ ಸಿದ್ದಾಪೂರ, ಆನಂದ ರೂಗಿ, ಹಣಮಂತ ಮೂಲಿ, ಈಶ್ವರಪ್ಪ ಬಾಗಿ, ವೆಂಕಟೇಶ ದಾಸರ, ಚೇತನ ಹೆಗ್ಗಳಗಿ, ನವಿನ ತಾವಂಶಿ, ಮುದಕಣ್ಣ ಗಾಣಿಗೇರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ