LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!

ಬೆಂಗಳೂರು : ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದಿ, ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸ್ವಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಅಜಯ್ ರಾವ್ ಹಾಗೂ ಸ್ವಪ್ನಾ ಅವರು ಪ್ರೀತಿಸಿ 2014 ರಲ್ಲಿ ಮದುವೆಯಾಗಿದ್ದರು. ಹೊಸೇಪಟೆಯಲ್ಲಿ ಆಪ್ತರು, ಸಂಬಂಧಿಕರ ಸಮ್ಮುಖದಲ್ಲಿ ಸರಳವಾಗಿ ಈ ಜೋಡಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ ಚರಿಷ್ಮಾ ಹೆಸರಿನ ಮಗಳು ಕೂಡ ಇದ್ದಾಳೆ. ಇದೀಗ 11 ವರ್ಷದ ಬಳಿಕ ಈ ಜೋಡಿ ವಿಚ್ಛೇದನಕ್ಕೆ ಮುಂದಾಗಿದೆ.

ಅಜಯ್ ರಾವ್ ಅವರು 2003 ರಲ್ಲಿ ಬಿಡುಗಡೆ ಆದ 'ಎಕ್ಸ್ಕ್ಯೂಸ್ ಮೀ' ಸಿನಿಮಾ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅದಕ್ಕೂ ಮುನ್ನ ಸುದೀಪ್ ನಟನೆಯ 'ಕಿಚ್ಚ' ಸಿನಿಮಾನಲ್ಲಿ ಸುದೀಪ್ ಗೆಳೆಯನ ಪಾತ್ರದಲ್ಲಿ ನಟಿಸಿದ್ದರು. ಬಳಿಕ 'ತಾಜ್ ಮಹಲ್', 'ಪ್ರೇಮ್ ಕಹಾನಿ', 'ಕೃಷ್ಣನ್ ಲವ್ ಸ್ಟೋರಿ', 'ಕೃಷ್ಣನ್ ಮ್ಯಾರೇಜ್ ಸ್ಟೋರಿ', 'ಕೃಷ್ಣ-ಲೀಲಾ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026