LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಎಪಿಯಿಂದ ಸೀರೆ ಕುಚ್ಚು ತರಬೇತಿ ಕಾರ್ಯಕ್ರಮ ಆಯೋಜನೆ

ಮಂಗಳೂರು: ರಾಮರಾಜ್ಯ ನಿರ್ಮಾಣ ಪರಿಕಲ್ಪನೆಯಲ್ಲಿ ಮಹಿಳೆಯ ಸ್ವಾವಲಂಬನೆ ಮುಖ್ಯವಾಗಿದ್ದು, ಆಮ್ ಆದ್ಮಿ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಸೀರೆ ಕುಚ್ಚು ಹಾಕುವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶಾದ್ಯಂತ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನ ಸಂಭ್ರಮ ಇರುವ ಸಂದರ್ಭದಲ್ಲೇ, ಆಮ್ ಆದ್ಮಿ ಪಕ್ಷ ಮಹಿಳೆಯರ ಸ್ವಾವಲಂಬನೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ನಗರದ ಆಮ್ ಆದ್ಮಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಒಂದು ದಿನದ ಸೀರೆ ಕುಚ್ಚು ಹಾಕುವ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾ ರಾಕೇಶ್ ಅವರ ನೇತೃತ್ವದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನೂರಾರು ಮಹಿಳೆಯರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಂಡರು.

ಉದ್ಯೋಗಕ್ಕೆ ಅಗತ್ಯ ಕೌಶಲ್ಯಗಳ ಅಭಿವೃದ್ಧಿಪಡಿಸಿ ಹೇಗೆ ಹಣ ಸಂಪಾದನೆ ಮಾಡಿಕೊಳ್ಳಬಹುದೆಂದು ತರಬೇತಿಯಲ್ಲಿ ಮಾಹಿತಿ ನೀಡಲಾಯಿತು. ಇದು ಗೃಹಿಣಿಯರಿಗೆ, ವಿದ್ಯಾರ್ಥಿನಿಯರಿಗೆ ಸಂಪಾದನೆಗೆ ಸಂಪಾದನೆಯ ಮಾರ್ಗವಾಗಲಿದ್ದು, ಆರ್ಥಿಕ ಸ್ವಾವಂಬನೆ ಹೊಂದಬಹುದಾಗಿದೆ.

ಮಹಿಳೆಯರಿಗೆ ಎಲ್ಲಾ ರಂಗದಲ್ಲಿ ಪ್ರಾತಿನಿಧ್ಯ ಸಿಗಬೇಕು ಎನ್ನುವುದು ಆಮ್ ಆದ್ಮಿ ಪಕ್ಷದ ಧ್ಯೇಯವಾಗಿದ್ದು, ಅದಕ್ಕೆ ತಕ್ಕೆಂತೆ ಮಹಿಳಾ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ದೆಹಲಿ, ಪಂಜಾಬ್‌ನಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಆಮ್ ಆದ್ಮಿ ಪಕ್ಷ, ಈಗ ರಾಜ್ಯದಲ್ಲೂ ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಮೂಲಕ ಮಹಿಳಾ ಸಂಘಟನೆ, ಸ್ವಾವಲಂಬನೆಗೆ ಸಹಾಯ ಮಾಡುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರ