LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರಿಂದ “ಸಾರಿಗೆ ಮಿತ್ರ” ಹೆಚ್‍ಆರ್‍ಎಂಎಸ್ ಮೊಬೈಲ್ ಆ್ಯಪ್ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ “ಸಾರಿಗೆ ಮಿತ್ರ” ಹೆಚ್‍ಆರ್‍ಎಂಎಸ್ ಮೊಬೈಲ್ ಆಪ್ (ಆವೃತ್ತಿ 2.0.0) ಅನ್ನು ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಬಿಡುಗಡೆ ಮಾಡಿದರು.

ಡಿಜಿಟಲ್ ಪರಿವರ್ತನೆ, ಪಾರದರ್ಶಕತೆ, ಕಾರ್ಯಕ್ಷಮತೆ ವೃದ್ಧಿಗೊಳಿಸಲು ಮತ್ತು ನೌಕರರ ಕಲ್ಯಾಣದ ಮೇಲೆ ಬಲವಾದ ಗಮನವನ್ನು ಕೇಂದ್ರೀಕರಿಸಿ ಹೊಸ ವರ್ಷದ ಸಾರ್ಥಕ ಆರಂಭವಾಗಿ ಈ ಮೊಬೈಲ್ ಆ್ಯಪ್ ಅನ್ನು  ಬಿಡುಗಡೆಗೊಳಿಸಲಾಗಿದೆ.

ಹೆಚ್‍ಆರ್‍ಎಂಎಸ್ ಮೊಬೈಲ್ ಆ್ಯಪ್ ಅನ್ನು ನೌಕರರಿಗೆ ತ್ವರಿತ ಸಮಯದಲ್ಲಿ ಮಾನವ ಸಂಪನ್ಮೂಲ ಸೇವೆಗಳನ್ನು ಸ್ಮಾರ್ಟ್ ಫೋನ್ ಮೂಲಕ ಒದಗಿಸುವ ಉದ್ದೇಶದಿಂದ ಅಭಿವೃದ್ಧಿ ಪಡಿಸಲಾಗಿದೆ.

“ಸಾರಿಗೆ ಮಿತ್ರ” ಹೆಚ್‍ಆರ್‍ಎಂಎಸ್ ಮೊಬೈಲ್ ಆಪ್ ನಿಂದ ಜಿಯೋ–ಫೆನ್ಸಿಂಗ್ ಆಧಾರಿತ ಹಾಜರಾತಿ ವ್ಯವಸ್ಥೆ, ಮಾಸಿಕ ಹಾಜರಾತಿ ವೀಕ್ಷಣೆ, ವೈಯಕ್ತಿಕ ವಿವರಗಳು, ಸೇವಾ ದಾಖಲಾತಿ (ಸರ್ವಿಸ್ ರಿಜಿಸ್ಟರ್) ವಿವರಗಳು, ಕುಟುಂಬ ಸದಸ್ಯರ ಮಾಹಿತಿ ಹಾಗೂ ನಾಮನಿರ್ದೇಶಿತ (ನಾಮಿನಿ) ವಿವರಗಳ ವೀಕ್ಷಣೆ, ಮಾಸಿಕ ವೇತನ ಪಟ್ಟಿ (ಪೇ ಸ್ಲಿಪ್)ಗಳನ್ನು ಒಂದೇ ಕ್ಲಿಕ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ರಜೆ ನಿರ್ವಹಣಾ ವ್ಯವಸ್ಥೆ ಮೂಲಕ ಖಾತೆಯಲ್ಲಿರುವ ರಜೆ ವಿವರಗಳ ಪರಿಶೀಲನೆ, ಆಂತರಿಕ ಸಂವಹನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ನಿಗಮದ ವಿವಿಧ ವಿಭಾಗಗಳಿಂದ ಹೊರಡಿಸಲಾಗುವ ಸುತ್ತೋಲೆ ವಿವರಗಳು ದೊರಕುವುದಲ್ಲದೆ, ಒಂದರ್ಥದಲ್ಲಿ ಅಂಗೈಯಲ್ಲಿ ನೌಕರರಿಗೆ ಈ ಆ್ಯಪ್ ಮೂಲಕ ಸಮಗ್ರ ಮಾಹಿತಿ ಲಭ್ಯವಾಗಲಿದೆ.

ಈ ಸಂದರ್ಭದಲ್ಲಿ ಕೆಎಸ್‍ಆರ್‍ಟಿಸಿ  ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ನಿರ್ದೇಶಕರಾದ ಡಾ.ನಂದಿನಿ ದೇವಿ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ