Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಕ್ಟೋಬರ್ 7ರಂದು ಕೆಎಸ್‌ಆರ್‌ಟಿಸಿ ನೌಕರರ ಸತ್ಯಾಗ್ರಹ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ ೭ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.

ಸಾರಿಗೆ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದೊಂದಿಗೆ ಹಲವು ಕಾ ಹಂತಗಳಲ್ಲಿ ಚರ್ಚೆ ನಡೆದಿದ್ದು, ಕೆಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಫೆಬ್ರವರಿ ೧೮ ಮತ್ತು ಮೇ ೧೨ರಂದು ನಡೆದ ಸಭೆಗಳಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನಕ್ಕೂ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್?ರ ಯೂನಿಯನ್(ಎಐಟಿಯುಸಿ) ಜ್ಯೋತಿ ಅನಂತಸುಬ್ಬರಾವ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿಯ ಬಿ. ಜಯದೇವರಾಜೇ ಅರಸು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿಐಟಿಯು)ನ ಎಚ್.ಡಿ. ರೇವಪ್ಪ, ವಿಶ್ವ ಕಾರ್ಮಿಕರ ಕೂಟ ಸಾರಿಗೆ ನಿಗಮದ ಗಂಡಸಿ ಸದಾನಂದ ಸ್ವಾಮಿ ನೌಕರರಿಗೆ ೨೦೨೪ ರ ಜನವರಿ ೧ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಅನ್ವಯವಾಗುವ ವೇತನ ಪರಿಷ್ಕರಣೆಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

೨೦೨೦ರ ಸಾಲಿನ ೧೨ ತಿಂಗಳ ವೇತನ ಹಿಂಬಾಕಿ, ಬಾಕಿ ಇರುವ ೧,೭೯೨ ಕೋಟಿ ಮೊತ್ತವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕಿದ್ದು, ಮಂಜೂರಾಗಿ ರುವ ೬೨೦ ಕೋಟಿ ರೂ ಬಿಡುಗಡೆ ಮಾಡಲಾಗಿದೆ.

ಬಾಕಿ ಇರುವ ೧೧೭೨ ಕೋಟಿ ರೂ ಮೊತ್ತವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು. ಜೊತೆಗೆ ಚಾಲಕರು, ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ವಾರದ ರಜೆ ಮತ್ತು ಇತರ ರಜಾ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಬೇಕು. ನಿಗದಿತ ಸಮಯಕ್ಕೆ ಕರ್ತವ್ಯ ನಿರ್ವಹಿಸಲು ಹಾಗೂ ವಿಶ್ರಾಂತಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಬಾಕಿ ಇರುವ ಪಿಎಫ್, ಗ್ರಾಚ್ಯುಟಿ, ತುಟ್ಟಿ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST