LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SBI ನೇಮಕಾತಿ: 13,735 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರಿಕಲ್ ಮಟ್ಟದ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬರೋಬ್ಬರಿ 13,735 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆ ವಿವರ: 13,735 ಗ್ರಾಹಕ ಬೆಂಬಲ ಮತ್ತು ಮಾರಾಟದಲ್ಲಿ ಕಿರಿಯ ಸಹಾಯಕರ ಹುದ್ದೆಗಳು. ಇದರಲ್ಲಿ ಕರ್ನಾಟಕಕ್ಕೆ 50 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿ ಮೀರಿಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಪ್ರಿಲಿಮ್ಸ್, ಮೇನ್ಸ್ ಮತ್ತು ಭಾಷಾ ಪರಿಣಿತಿ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.

ಈ ಹುದ್ದೆಗೆ ಡಿಸೆಂಬರ್ 17ರಿಂದ ಅರ್ಜಿ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನ ಜನವರಿ 7 ಆಗಿದೆ. ಈ ಹುದ್ದೆಗಳಿಗೆ 2025ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಮುಖ್ಯ ಪರೀಕ್ಷೆ 2025ರ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ನಡೆಯುವ ಸಾಧ್ಯತೆ ಇದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sbi.co.in ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!